ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲ: ಸರ್ಕಾರೇತರ ಶಾಲೆಗೂ ಸೌಕರ್ಯಕ್ಕೆ ಒತ್ತಾಯ

Last Updated 20 ಡಿಸೆಂಬರ್ 2013, 8:56 IST
ಅಕ್ಷರ ಗಾತ್ರ

ವಿಟ್ಲ: ಸರ್ಕಾರಿ ಶಾಲೆಗಳಿಗೆ ಮತ್ತು ಸರ್ಕಾರಿ ಶಾಲೆಗಳ ಮಕ್ಕಳಿಗೆ ದೊರಕುವಂತಹ ಎಲ್ಲಾ ಸರ್ಕಾರಿ ಸೌಲಭ್ಯಗಳು ಸರ್ಕಾರೇತರ ಶಾಲೆಯ ಮಕ್ಕಳಿಗೂ ದೊರಕಬೇಕು ಎಂದು ಕರೋಪಾಡಿ ಗ್ರಾಮ ಪಂಚಾಯಿತಿನಲ್ಲಿ ಮಂಗಳವಾರ ಜರುಗಿದ 2013–-14ನೇ  ಸಾಲಿನ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಒತ್ತಾಯಿಸಿದರು.

ಸಭೆಯ ನೇತೃತ್ವವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ ಅಬ್ದುಲ್ ಜಲೀಲ್ ಕರೋಪಾಡಿ ವಹಿಸಿದ್ದರು. ವಿದ್ಯಾರ್ಥಿಗಳು ಸಭೆಯಲ್ಲಿ ಮಂಡಿಸಿದ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಅವರು ಕರೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳಿಗೂ ಸರ್ಕಾರದಿಂದ ದೊರಕುವ ಸವಲತ್ತು­ಗಳನ್ನು ಪಡೆಯಲು ಮತ್ತು ಶಾಲಾ ವಠಾರದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ವಾತಾವರಣವನ್ನು ನಿರ್ಮಿಸಲು ಗ್ರಾಮ ಪಂಚಾಯಿತಿ ಯಾವತ್ತೂ ಬದ್ಧವಾಗಿದೆ ಎಂದರು.

ಸಾರ್ವಜನಿಕರು ಮತ್ತು ಮಕ್ಕಳ ಪೋಷಕರು  ಸರಕಾರದ ಅನುದಾನವನ್ನೇ ಕಾಯದೇ ಶಾಲೆಯ ಪ್ರಗತಿಗೆ ತಮ್ಮ ಸಹಕಾರವನ್ನು ನೀಡುವುದು ಬಹಳ ಅಗತ್ಯ ಎಂದು ಅಭಿಪ್ರಾಯ ಪಟ್ಟರು. ದಕಜಿಪ ಮಾದರಿ ಹಿಪ್ರಾ ಶಾಲೆಮಿತ್ತನಡ್ಕ, ಇಲ್ಲಿಯ ವಿದ್ಯಾರ್ಥಿ ಮುಹಮ್ಮದ್ ನಿಯ್ ಮಕ್ಕಳ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಕರೋಪಾಡಿ ಗ್ರಾಮದಲ್ಲಿ ಒಂದು ಪ್ರೌಢ ಶಾಲೆ ಮಂಜೂರು ಮಾಡುವಂತೆ ಒತ್ತಾಯಿಸಿದ ವಿದ್ಯಾರ್ಥಿಗಳು, ನಮಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಅಗತ್ಯ ಶಿಕ್ಷಕರನ್ನು ನೇಮಕ ಮಾಡುಂತೆ ಒತ್ತಾಯಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೂರ್ಯಕಾಂತಿ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ  ಲೋಲಾಕ್ಷಿ, ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಪ್ರತಿಭಾ ಕುಮಾರಿ  ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT