ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿತರಣೆಯಾಗದ ಪ್ರೋತ್ಸಾಹ ಧನ: ಪ್ರತಿಭಟನೆ

Last Updated 7 ಮೇ 2012, 19:30 IST
ಅಕ್ಷರ ಗಾತ್ರ

ಗೌರಿಬಿದನೂರು: ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ನಿರ್ಮಿಸಲಾದ ಶೌಚಾಲಯಗಳ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಫಲಾನುಭವಿಗಳು ತಾಲ್ಲೂಕಿನ ಹಿರೇಬಿದನೂರು ಗ್ರಾಮ ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ನಾರಾಯಣ ರೆಡ್ಡಿ ಮಾತನಾಡಿ, `ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ಫಲಾನುಭವಿಗಳು ವೈಯಕ್ತಿಕವಾಗಿ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದಿಂದ ಪ್ರೋತ್ಸಾಹಧನ ಬಿಡುಗಡೆಗೊಂಡು ಒಂಬತ್ತು ತಿಂಗಳು ಕಳೆದಿವೆ. ಆದರೆ ಈವರೆಗೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನವನ್ನು ವಿತರಿಸಿಲ್ಲ. ಪ್ರೋತ್ಸಾಹ ಧನ ವಿತರಿಸಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ~ ಎಂದು ಆರೋಪಿಸಿದರು.

ಮುಖಂಡರಾದ ಸವಿತಾ ನಟೇಶ್, `ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳು ವೈಯಕ್ತಿಕವಾಗಿ  ಶೌಚಾಲಯ ನಿರ್ಮಿಸಿಕೊಂಡಿದ್ದು, 160 ಮಂದಿ ಅರ್ಹರ ಪಟ್ಟಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಆದರೆ ಪಟ್ಟಿಗೆ ಅನುಸಾರವಾಗಿ ಅರ್ಹರಿಗೆ ಪ್ರೋತ್ಸಾಹ ಧನ ವಿತರಿಸುತ್ತಿಲ್ಲ. ಪ್ರೋತ್ಸಾಹ ಧನ ವಿತರಣೆಯಾಗುವವರೆಗೆ ಪ್ರತಿಭಟನೆ ನಡೆಸಲಾಗುವುದು~ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಹಿರೇಬಿದನೂರು ಗ್ರಾಮ  ಪಂಚಾಯಿತಿ ಅಧ್ಯಕ್ಷ ಖಯೂಂಖಾನ್,  `ಫಲಾನುಭವಿಗಳ ಅಂತಿಮ ಪಟ್ಟಿಯನ್ನು ತಯಾರಿಸಿ  ಮೇ 14ರಂದು ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು. ಅದರ ಬಳಿಕವೇ ಪ್ರೋತ್ಸಾಹ ಧನ ವಿತರಿಸಲಾಗುವುದು~ ಎಂದರು. 
       
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT