ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ : ಸಂಕ್ಷಿಪ್ತ ಸುದ್ದಿ

Last Updated 4 ಜನವರಿ 2013, 19:59 IST
ಅಕ್ಷರ ಗಾತ್ರ

ಮದ್ಯದ ಅಮಲಿನಲ್ಲಿ ಗುಂಡಿನ ದಾಳಿ 9 ಬಲಿ
ಮನಿಲಾ (ಐಎಎನ್‌ಎಸ್):
ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟು, 11ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಫಿಲಿಪ್ಪಿನ್ಸ್‌ನ ಗ್ರಾಮವೊಂದರಲ್ಲಿ ಶುಕ್ರವಾರ ನಡೆದಿದೆ. ಗುಂಡು ಹಾರಿಸಿದ ರೊನಾಲ್ಡ್ ಬೇ ಎಂಬಾತನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಭಾರತೀಯ ಟಿವಿ ಕಾರ್ಯಕ್ರಮ: ಆಕ್ಷೇಪ
ಇಸ್ಲಾಮಾಬಾದ್ (ಪಿಟಿಐ):
ಭಾರತ, ಟರ್ಕಿ ಸೇರಿದಂತೆ ಎಲ್ಲಾ ವಿದೇಶಿ ಧಾರಾವಾಹಿಗಳನ್ನು ಪಾಕಿಸ್ತಾನದ ಟೆಲಿವಿಷನ್ ಚಾನೆಲ್‌ಗಳಲ್ಲಿ ವೀಕ್ಷಕರು ಅತ್ಯಧಿಕ ಪ್ರಮಾಣದಲ್ಲಿ ವೀಕ್ಷಿಸುವ ಸಮಯದಲ್ಲಿ ಪ್ರಸಾರ ಮಾಡದಂತೆ ನಿರ್ಬಂಧ ಹೇರಬೇಕೆಂದು ಪಾಕಿಸ್ತಾನ ಸಂಸದೀಯ ಸಮಿತಿ ಸರ್ಕಾರವನ್ನು ಕೋರಿದೆ.

ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ಮಾಹಿತಿ ಹಾಗೂ ಪ್ರಸಾರ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ತನ್ನ ಶಿಫಾರಸುಗಳನ್ನು ಸಲ್ಲಿಸಿದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸಂಸದ ಬೆಲುಮ್ ಹಸನೀನ್ ತಿಳಿಸಿದ್ದಾರೆ.

20 ಉಗ್ರರ ಬಲಿ
ಇಸ್ಲಾಮಾಬಾದ್ (ಐಎಎನ್‌ಎಸ್
): ಪಾಕಿಸ್ತಾನದ ಕುರ‌್ರಂ ಹಾಗೂ ಖೈಬರ್ ಪ್ರಾಂತ್ಯದಲ್ಲಿ ಶುಕ್ರವಾರ ತಾಲಿಬಾನ್ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 20 ಭಯೋತ್ಪಾದಕರು ಹತ್ಯೆಯಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಜಿಯೋ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅನಾಥಾಶ್ರಮದಲ್ಲಿ ಬೆಂಕಿ: 10 ಸಾವು
ಬೀಜಿಂಗ್ (ಐಎಎನ್‌ಎಸ್): 
ಇಲ್ಲಿನ ಹೆನಾನ್ ಪ್ರಾಂತ್ಯದ ಲಂಕೋ ಕೌಂಟಿ ಎಂಬಲ್ಲಿರುವ ಅನಾಥಾಶ್ರಮದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಏಳು ಮಕ್ಕಳು ಸೇರಿದಂತೆ ಹತ್ತು ಮಂದಿ ಮೃತಪಟ್ಟಿದ್ದಾರೆ.

ಅತ್ಯಾಚಾರ: ಬಾಲಕಿ ಸ್ಥಿತಿ ಚಿಂತಾಜನಕ
ಲಾಹೋರ್ (ಪಿಟಿಐ):
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮೂವರು ಕಾಮುಕರಿಂದ ಅತ್ಯಾಚಾರಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಂಬತ್ತು ವರ್ಷದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಹಾವಾಲ್ಪುರ್‌ದ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಾಲಕಿಯ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿದೆ ಎಂದಿರುವ ವೈದ್ಯರು ತೀವ್ರವಾದ ರಕ್ತಸ್ರಾವ ಹಾಗೂ ಆಂತರಿಕ ಗಾಯಗಳು ಉಂಟಾಗಿವೆ ಎಂದು ಹೇಳಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವಾಗಿರುವುದನ್ನು ವೈದ್ಯಕೀಯ ವರದಿ ಖಚಿತಪಡಿಸಿದ್ದು, ಏಳು ಮಂದಿಯ ಮೇಲೆ ಅಪಹರಣ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.  ಆರೋಪಿಗಳಲ್ಲಿ ಐದು ಮಂದಿಯ ಹೆಸರನ್ನು ಬಾಲಕಿಯ ತಾಯಿ ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಭಾರತಕ್ಕೆ ಸಹಕಾರ ನೀಡಲು ಅಮೆರಿಕ ಸಿದ್ಧ
ವಾಷಿಂಗ್ಟನ್ (ಐಎಎನ್‌ಎಸ್)
: ಸಾರ್ವಜನಿಕ ಹಾಗೂ ಖಾಸಗಿ ಸಂಘಟನೆಗಳನ್ನು  ಬಲಪಡಿಸುವ  ಮೂಲಕ  ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು  ತಡೆಯುವ ವಿಚಾರದಲ್ಲಿ ಭಾರತಕ್ಕೆ ಸಹಕಾರ ನೀಡುವುದಾಗಿ ಅಮೆರಿಕ ಸರ್ಕಾರ  ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT