ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ-ಪೊಲೀಸರ ಘರ್ಷಣೆ

Last Updated 7 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹೈದರಾಬಾದ್(ಪಿಟಿಐ): ತೆಲಂಗಾಣ ರಾಜ್ಯ ರಚನೆ ವಿವಾದ ಉಸ್ಮಾನಿಯ ವಿಶ್ವವಿದ್ಯಾಲಯ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು. ರಾಲಿ ನಡೆಸಲು ಯತ್ನಿಸಿದ ವಿದ್ಯಾರ್ಥಿಗಳು ಪೊಲೀಸರ ಜತೆ ಸಂಘರ್ಷಕ್ಕೆ ಇಳಿದರು. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿದರು.

ರಾಯಲ ಸೀಮಾಂಧ್ರ ಭಾಗದ ಸರ್ಕಾರಿ ಅಧಿಕಾರಿಗಳು ಸಭೆ ಸೇರಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣಕ್ಕೆ ವಿದ್ಯಾರ್ಥಿಗಳು ರ‌್ಯಾಲಿಯಲ್ಲಿ ತೆರಳಿ ಮುತ್ತಿಗೆ ಹಾಕಿ ಸಭೆ ಅಂತ್ಯಗೊಳಿಸಲು ಯತ್ನಿಸಿದಾಗ  ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು. ವಿದ್ಯಾರ್ಥಿಗಳು `ಜೈ ತೆಲಂಗಾಣ' ಎಂದು ಘೋಷಣೆ ಕೂಗುತ್ತಾ  ಬ್ಯಾರಿಕೇಡ್ ತಳ್ಳಿ, ಪೊಲೀಸರತ್ತ ಕಲ್ಲು ತೂರಿದಾಗ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಿದರು.

ಈ ವೇಳೆ ಹಲವು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು. ರ‌್ಯಾಲಿ ನಡೆಸಲು ವಿದ್ಯಾರ್ಥಿಗಳು ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಶಾಂತಿಯುತ ರಾಲಿ ನಡೆಸಲು ಉಸ್ಮಾನಿಯಾ ವಿವಿ ಜಂಟಿ ಕ್ರಿಯಾ ಸಮಿತಿ ಈ ಹಿಂದೆ ಅನುಮತಿ ಕೇಳಿತ್ತು. ಆದರೆ ಪೊಲೀಸರು ಅದಕ್ಕೆ ನಿರಾಕರಿಸಿದ್ದರು. ತೆಲಂಗಾಣ ರಾಜ್ಯ ರಚನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಒತ್ತಾಯಿಸಿ `ತೆಲಂಗಾಣ ಬಂದ್'ಗೆಕ್ರಿಯಾ ಸಮಿತಿ  ಕರೆ ನೀಡಿತ್ತು.

ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕಲ್ಲುತೂರಾಟದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ನಿಜಾಂ ಕಾಲೇಜು ಹಾಸ್ಟೆಲ್ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT