ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ದಾಖಲಾತಿ: ಸಚಿವರ ಎಚ್ಚರಿಕೆ

Last Updated 1 ಜೂನ್ 2011, 19:10 IST
ಅಕ್ಷರ ಗಾತ್ರ

ಯಲಹಂಕ:  ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಡಿಮೆಯಾದರೆ ಶಿಕ್ಷಕರನ್ನೆ ಹೊಣೆಗಾರರನ್ನಾಗಿ ಮಾಡುವುದರ ಜೊತೆಗೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಸಿದರು.

ಉಪನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಮತ್ತು ನೂತನ ಕಟ್ಟಡದ ಉದ್ಘಾಟನೆ ಹಾಗೂ ಸರ್ಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ ಸಹ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳ ಕಡೆಗೆ ಮುಖ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೋಗಲು ಅವಕಾಶ ನೀಡದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಯಲಹಂಕಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ  ಸಿಂಗನಾಯಕನಹಳ್ಳಿ ಗ್ರಾಮಕ್ಕೆ ಪ್ರೌಢಶಾಲೆ ಯನ್ನು ಮಂಜೂರು ಮಾಡಬೇಕೆಂದು ಸಚಿವರಿಗೆ ಮನವಿ ಮಾಡಿದರು. ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕುಮಾರ್ ನಾಯಕ್ ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಆರ್.ಶಶಿಧರ್, ಜಿ.ಪಂ.ಸದಸ್ಯೆ ವಾಣಿಶ್ರೀ ವಿಶ್ವನಾಥ್, ಬಿಬಿಎಂಪಿ ಸದಸ್ಯ ಎಂ.ಮುನಿರಾಜು, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಎ.ದೇವಪ್ರಕಾಶ್, ಪ್ರೌಢಶಿಕ್ಷಣ ನಿರ್ದೇಶಕ ಹನುಮಂತರಾಯಪ್ಪ, ಮುಖ್ಯಶಿಕ್ಷಕಿ ಶಕೀಲಾ, ಎಸ್‌ಡಿಎಂಸಿ ಅಧ್ಯಕ್ಷ ಕಾಕೋಳು ಲಕ್ಕಪ್ಪ ಮೊದಲಾ ದವರು ಉಪಸ್ಥಿತರಿದ್ದರು. ಬೆಂಗಳೂರು ಉತ್ತರ ಜಿಲ್ಲಾ ಉಪನಿರ್ದೇಶಕ ಟಿ.ಸಿ.ಚಂದ್ರಯ್ಯ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಬಿ.ಜಯರಂಗ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT