ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಂದ ರಸ್ತೆತಡೆ: ಪ್ರಯಾಣಿಕರ ಪರದಾಟ

Last Updated 11 ಫೆಬ್ರುವರಿ 2012, 8:30 IST
ಅಕ್ಷರ ಗಾತ್ರ

ಅರಸೀಕೆರೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್‌ಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿರಾಕರಿಸುತ್ತಿರು ವುದನ್ನು ಖಂಡಿಸಿ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಗಳು ವಿವಿಧ ಪ್ರಗತಿ ಪರ ಸಂಘಟನೆ ಜತೆ ಸೇರಿ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ 8.30ಕ್ಕೆ ದಿಢೀರ್ ಪ್ರತಿಭಟನೆ ಆರಂಭಿಸಿದ ನೂರಾರು ವಿದ್ಯಾರ್ಥಿಗಳು ಬಸ್ ನಿಲ್ದಾಣದಿಂದ ಬಸ್ಸುಗಳು ಹೊರ ಹೋಗದಂತೆ ತಡೆದರಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. 

ರಸ್ತೆ ತಡೆಯಿಂದ ರಸ್ತೆಯ ಎರಡೂ ಬದಿ ಸುಮಾರು ಒಂದು ಕಿಮೀ ದೂರದವರೆಗೂ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ದೂರದ ಪ್ರದೇಶಗಳಿಗೆ ಹೋಗುವ ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸಿದರು.

ಪಾಸ್ ಹೊಂದಿದ್ದರೂ ಪಟ್ಟಣದಿಂದ ಹೋಗುವ ಮತ್ತು ಅರಸೀಕೆರೆಗೆ ಬರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಚಾಲಕರು ಮತ್ತು ನಿರ್ವಾಹಕರು ನಿರಾಕರಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಬಂದರೆ ಆದಾಯ ಕಡಿಮೆಯಾಗಿ ಪ್ರಯಾಣಿಕರಿಗೆ ಜಾಗವಿಲ್ಲದಂತಾಗುತ್ತದೆ ಎಂಬ ಸಬೂಬಬನ್ನು ನಿರ್ವಾ ಹಕರು ಮತ್ತು ಚಾಲಕರು ನೀಡುತ್ತಾರೆ.  ಹೀಗಾದರೆ ನಾವು ಶಾಲಾ ಕಾಲೇಜುಗಳಿಗೆ ಹೋಗುವುದಾದರೂ ಹೇಗೆ ಎಂಬುದು ವಿದ್ಯಾರ್ಥಿಗಳ ವಾದವಾಗಿತ್ತು.

ಪರಿಸ್ಥಿತಿಯ ಗಂಭೀರತೆ ಅರಿತ ಘಟಕ ವ್ಯವಸ್ಥಾಪಕ ವೆಂಕಟೇಶ್ ಸ್ಥಳಕ್ಕೆ ಧಾವಿಸಿ, `ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ~ ಎಂಬ ಭರವಸೆ ನಿಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೊನೆಗೊಳಿಸಿದರು.
ಡಿವೈಎಸ್‌ಪಿ ಜೆ.ಕೆ. ರಶ್ಮಿ,ಘಟಕ ವ್ಯವಸ್ಥಾಪಕರ ಜತೆ ಚರ್ಚಿಸಿ ವಿದ್ಯಾರ್ಥಿಗಳ ಮನವೊಲಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಹೇಮಂತ್ ಕುಮಾರ್, ನಗರ ಘಟಕದ ಅಧ್ಯಕ್ಷ ಕಿರಣ್‌ಗೌಡ, ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.  
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT