ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಸನ್ಮಾನ

Last Updated 23 ಜುಲೈ 2013, 19:59 IST
ಅಕ್ಷರ ಗಾತ್ರ

ಜೆಇಇ, ಸಿಇಟಿ, ಎಐಐಎಂಎಸ್, ಜೆಐಪಿಎಂಇಆರ್, ಎನ್‌ಇಇಟಿ, ಒಲಿಂಪಿಯಾಡ್ಸ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ತನ್ನ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾಸಿಸುವ ಸಲುವಾಗಿ ಬೇಸ್ ತರಬೇತಿ ಕೇಂದ್ರವು ಈಚೆಗೆ `ಗ್ರ್ಯಾಂಡ್‌ಸ್ಲಾಮ್ 2013' ಕಾರ್ಯಕ್ರಮ ಹಮ್ಮಿಕೊಂಡಿತ್ತು.  

ರೆಸಿಡೆನ್ಸಿ ರಸ್ತೆಯಲ್ಲಿರುವ `ದಿ ಗುಡ್ ಶೆಫರ್ಡ್' ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಸನ್ಮಾನಿತ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು. ಪಿಇಎಸ್ ಸಂಸ್ಥೆಗಳ ನಿರ್ದೇಶಕ ಪ್ರೊ.ಡಿ ಜವಾಹರ್, ವಿಕ್ರಮ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ತಜ್ಞ ಡಾ.ಸುಧೀರ್ ಪೈ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

`ನಾವು ಹಾಕಿದ ಪ್ರಯತ್ನಕ್ಕೆ ತಕ್ಕ ಫಲ ದೊರೆತಿರುವುದಕ್ಕೆ ತುಂಬ ಖುಷಿಯಾಗಿದೆ. ನಿರಂತರವಾಗಿ ಅಧ್ಯಯನ ಮಾಡಿ ಎಲ್ಲರ ನಿರೀಕ್ಷೆ ಪೂರೈಸಿದ ನಮ್ಮ ವಿದ್ಯಾರ್ಥಿಗಳ ಬಗ್ಗೆ ತುಂಬ ಹೆಮ್ಮೆ ಎನಿಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜಯಶಾಲಿಯಾದ ಎಲ್ಲ ವಿದ್ಯಾರ್ಥಿಗಳನ್ನೂ ಸಂಸ್ಥೆ ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ' ಎಂದು ವಿದ್ಯಾರ್ಥಿಗಳನ್ನು ಹರಸಿದರು `ಬೇಸ್' ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್.ನಾಗರಾಜ.

`ಕಾಲೇಜು ಶಿಕ್ಷಣದಲ್ಲಿ ಗುಣಮಟ್ಟ ಸುಧಾರಿಸಬೇಕಿದೆ. ಒಂದು ಒಳ್ಳೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಮಹತ್ತರ ಬದಲಾವಣೆ ತರಲು ಸಹಾಯಕ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಜ್ಞಾನದ ಹಸಿವು, ವಿನಮ್ರತೆ, ಕಠಿಣ ಪರಿಶ್ರಮ ಈ ಮೂರು ಅಂಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯಶಸ್ಸಿನ ಗುರಿಮುಟ್ಟಬೇಕು' ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಹೇಳಿದರು ಪಿಇಎಸ್ ಸಂಸ್ಥೆಗಳ ನಿರ್ದೇಶಕ ಪ್ರೊ.ಡಿ.ಜವಾಹರ್. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT