ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು

Last Updated 21 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಹೊಸಕೋಟೆ: `ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು~ ಎಂದು ಬೆಂಗಳೂರಿನ ವಚನ ಜ್ಯೋತಿ ಬಳಗದ ಅಧ್ಯಕ್ಷ ಎಸ್.ಪಿನಾಕಪಾಣಿ ಕಿವಿಮಾತು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕವು ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಚನ ಸಾಹಿತ್ಯ ಕುರಿತ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು~ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಿ.ಮಾ.ಸುಧಾಕರ್ ಮಾತನಾಡಿ, `ಜಿಲ್ಲೆಯ ವಿಭಜನೆಯ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರ ಬಡವಾಗಿದೆ. ಯುವಜನರಲ್ಲಿ ಸಾಹಿತ್ಯ ಅಭಿರುಚಿ ಮೂಡಿಸುವ ಮೂಲಕ ಈ ಕೊರತೆ ನೀಗಿಸುವ ಕೆಲಸ ಆಗಬೇಕು~ ಎಂದರು.
ಉಪನ್ಯಾಸಕ ಎಸ್.ರಾಮಲಿಂಗೇಶ್ವರ ಮಾತನಾಡಿ, `ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು~ ಎಂದರು.

ಸಾಹಿತ್ಯ ಪರಿಷತ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ.ಶ್ರೀಕಾಂತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT