ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು-ಆಚಾರ್ಯ

Last Updated 9 ಸೆಪ್ಟೆಂಬರ್ 2011, 19:35 IST
ಅಕ್ಷರ ಗಾತ್ರ

ಯಲಹಂಕ: `ವಿದ್ಯಾರ್ಥಿಗಳು ಕೇವಲ ಪಠ್ಯಕ್ಕಷ್ಟೇ ಪ್ರಾಮುಖ್ಯತೆ ನೀಡದೆ ಕ್ರೀಡಾ ಹಾಗೂ ಸಾಂಸ್ಕೃತಿಕ ರಂಗಗಳಲ್ಲೂ ತೊಡಗಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್.ಆಚಾರ್ಯ ಸಲಹೆ ನೀಡಿದರು.

ಇಲ್ಲಿನ ರೇವಾ ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿ.ಇ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ರಾಜ್ಯ ಸರ್ಕಾರ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇತರ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿದ್ದರೂ ಇಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದರಿಂದ ಸಾಕಷ್ಟು ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಬಂದು ಕಲಿಯುತ್ತಿದ್ದಾರೆ~ ಎಂದರು.

ರೇವಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಶ್ಯಾಮರಾಜು ಮಾತನಾಡಿದರು.
ಪ್ರಾಂಶುಪಾಲ ಡಾ. ರಾಣಾ ಪ್ರತಾಪರೆಡ್ಡಿ ಸ್ವಾಗತಿಸಿದರು. ಡೀನ್ ಧನಂಜಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT