ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರಿಗೆ ಕಿರುಕುಳ: ಪ್ರಾಂಶುಪಾಲ ಬಂಧನ

Last Updated 23 ಫೆಬ್ರುವರಿ 2011, 17:05 IST
ಅಕ್ಷರ ಗಾತ್ರ

ಯಾದಗಿರಿ: ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ ಇಲ್ಲಿನ ಸೆಂಟ್ ತೆರೇಸಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗಮುದ್ರೆ ಹಾಕಿ ಪ್ರಾಂಶುಪಾಲ ಜಾನ್ಸನ್ ಅವರನ್ನು ಬಂಧಿಸಲಾಗಿದೆ.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸುಮಾರು 25ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿನಿಯರು, ಬೇರೆ ಕಾಲೇಜಿಗೆ ತಮ್ಮನ್ನು ವರ್ಗಾವಣೆ ಮಾಡಬೇಕು ಎಂದು ಮನವಿ ಕೊಂಡ ಹಿನ್ನೆಲೆಯಲ್ಲಿ, ವಿದ್ಯಾರ್ಥಿನಿಯರ ತವರು ಜಿಲ್ಲೆಗಳ ನರ್ಸಿಂಗ್ ಕಾಲೇಜುಗಳಲ್ಲಿ ಒಂದು ವಾರದೊಳಗೆ ಪ್ರವೇಶ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಲ್ಲಿಯವರೆಗೆ ರಜೆ ಸೌಲಭ್ಯ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ವಿದ್ಯಾರ್ಥಿನಿಯರ ಆರೋಪದ ಮೇರೆಗೆ ನಗರ ಠಾಣೆಯ ಪೊಲೀಸರು ಮಂಗಳವಾರ ರಾತ್ರಿ ಪ್ರಾಂಶುಪಾಲರನ್ನು ಬಂಧಿಸಿ, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಪದಲ್ಲಿ ಸತ್ಯಾಂಶ ಕಂಡು ಬಂದಲ್ಲಿ ಕಾಲೇಜಿನ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಬುಧವಾರ ರಾತ್ರಿ ಸಹಾಯಕ ಆಯುಕ್ತೆ ಕವಿತಾ ಮನ್ನಿಕೇರಿ ನೇತೃತ್ವದಲ್ಲಿ ಡಿಎಸ್ಪಿ ಎಸ್.ಡಿ. ಬಾಗವಾಡಮಠ, ತಹಸೀಲ್ದಾರ ಗುರು ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ವೆಂಕಟೇಶ ಮುಂತಾದ ಅಧಿಕಾರಿಗಳಿದ್ದ ತಂಡ, ಕಾಲೇಜಿಗೆ ಬೀಗಮುದ್ರೆ ಹಾಕಿದೆ.

ಮಂಗಳವಾರ ಬೆಳಿಗ್ಗೆ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವ ಪ್ರಾಂಶುಪಾಲರ ವರ್ತನೆಯನ್ನು ಬಹಿರಂಗಗೊಳಿಸಿ, ಕಾನೂನುಕ್ರಮಕ್ಕೆ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT