ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ

Last Updated 22 ಮೇ 2012, 8:55 IST
ಅಕ್ಷರ ಗಾತ್ರ

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಹ ಬಾಲಕ- ಬಾಲಕಿಯರಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ತಾಲ್ಲೂಕಿನ ಆಯನೂರು, ಹಾರನಹಳ್ಳಿ ಮತ್ತು ಶಿವಮೊಗ್ಗ ನಗರದ ಕೋಟೆರಸ್ತೆಯಲ್ಲಿ ಇರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ವಿದ್ಯಾನಗರ, ಸಿರಿಗೆರೆ, ಹೊಳಲೂರು ಮತ್ತು ಉಂಬ್ಳೇಬೈಲು ಗ್ರಾಮಗಳಲ್ಲಿರುವ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲಿಚ್ಛಿಸುವ ಅಭ್ಯರ್ಥಿಗಳು 5ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು, ಹಿಂದುಳಿದ ವರ್ಗ ಅಥವಾ ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿರಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂ 15 ಸಾವಿರ ಮೀರಿರಬಾರದು. ಪರಿಶಿಷ್ಟ ಜಾತಿ/ವರ್ಗ ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ಇರುವುದಿಲ್ಲ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 11ರ ಒಳಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ: 08182 24007 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT