ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ ಮಂಜೂರಾತಿ ಗಣಕೀಕರಣ

Last Updated 18 ಜೂನ್ 2011, 7:20 IST
ಅಕ್ಷರ ಗಾತ್ರ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಭಾರತ ಸರ್ಕಾರದ ವಿದ್ಯಾರ್ಥಿವೇತನ ಮಂಜೂರಾತಿ ಕಾರ್ಯವನ್ನು ಗಣಕೀಕರಣ ಮಾಡುತ್ತಿದೆ. ಕಾಲೇಜುಗಳಿಗೆ ಶುಲ್ಕದ ಮೊತ್ತ ಹಾಗೂ ವಿದ್ಯಾರ್ಥಿಗಳಿಗೆ ಡೇ ಸ್ಕಾಲರ್ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ವರ್ಗದ ಕಾಲೇಜು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರ ಖಾತೆಯನ್ನು  SBM/SBI ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ತೆರೆದು ಭಾರತ ಸರ್ಕಾರದ ವಿದ್ಯಾರ್ಥಿವೇತನದ ಅರ್ಜಿಯಲ್ಲಿ ಖಾತೆ ಸಂಖ್ಯೆಯನ್ನು ನಮೂದಿಸಲು ಸೂಚಿಸಲಾಗಿದೆ. 2011-12ನೇ ಸಾಲಿನ ಶೈಕ್ಷಣಿಕ ವರ್ಷಾರಂಭವಾಗಿದ್ದು, ವಿದ್ಯಾರ್ಥಿಗಳು ನೊಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿವೇತನಕ್ಕೆ ಕೂಡಲೇ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೊಂದಣಿ ಮಾಡಿಸುವುದು, ನೋಂದಣಿ ಕಾರ್ಯದಲ್ಲಿ ಭಾಗವಹಿಸದೇ ವಿದ್ಯಾರ್ಥಿವೇತನ ಮಂಜೂರಾಗದಿದ್ದಲ್ಲಿ ವಿದ್ಯಾರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ.

ಆದ್ದರಿಂದ ಕೂಡಲೇ ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳು ಗಣಕೀಕೃತ ನೊಂದಣಿ ಮಾಡಿಸಿಕೊಳ್ಳತಕ್ಕದ್ದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಯನ್ನು ಸಂಪರ್ಕಿಸಲು ಸೂಚಿಸಿದೆ. ಆನ್‌ಲೈನ್  ನೊಂದಣಿಗಳಿಗೆ ..http://164.100.80.124/swscholarship (S.C) 2. http://stg2.kar.nic.in/stsmis(S.T) ವೆಬ್‌ಸೈಟ್‌ಗಳನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚಂದ್ರಾನಾಯ್ಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT