ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಡಿತ ಖಂಡಿಸಿ ಪಂಜಿನ ಮೆರವಣಿಗೆ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬಂಗಾರಪೇಟೆ: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.

`ತಾಲ್ಲೂಕಿನಲ್ಲಿ ಈಗಾಗಲೇ ಮಳೆಯಿಲ್ಲದೆ ಬರಗಾಲ ಕಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಮತ್ತು ದನ ಕರುಗಳಿಗೆ ಮೇವಿನ ಕೊರತೆ ಉಂಟಾಗಿ ತೊಂದರೆ ಉಂಟಾಗಿದೆ. ಗ್ರಾಮೀಣ ಜನರು ಸಂಕಷ್ಟ ಅನುಭವುಸತ್ತಿರುವ ಸಮಯದಲ್ಲೇ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ~ ಎಂದು ದೂರಿದರು.

ಮೆರವಣಿಗೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕಡಿತ ಖಂಡಿಸಿ ಪಟ್ಟಣದ ಕುವೆಂಪು ವೃತ್ತದಿಂದ  ಸಾಗಿದ ಮೆರವಣಿಗೆ ಬಜಾರ್ ರಸ್ತೆ ಹಾಗೂ ಸರ್ಕಾರಿ ಆಸ್ಪತ್ರೆ ವರೆಗೂ ತೆರಳಿತು. ರಾಜ್ಯ ಸರ್ಕಾರ ಈ ಕೂಡಲೇ ಎದುರಾಗಿರುವ ವಿದ್ಯುತ್ ಸಮಸ್ಯೆ ಪರಿಹರಿಸಬೇಕು, ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸುವುದಾಗಿ ಕಾರ್ಯಕರ್ತರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷರಾದ ಶ್ರೀನಿವಾಸ್, ನಾಗರಾಜ್, ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಣೇಶ್‌ಗೌಡ ಮುಂತಾದವರು ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT