ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಡಿತ ವಿರೋಧಿಸಿ ಪ್ರತಿಭಟನೆ

Last Updated 4 ಏಪ್ರಿಲ್ 2013, 6:27 IST
ಅಕ್ಷರ ಗಾತ್ರ

ಸೋಮವಾರಪೇಟೆ: ಪಟ್ಟಣದಲ್ಲಿ ಅನಿಯಮಿತ ವಿದ್ಯುತ್ ಕಡಿತ ಮಾಡುತ್ತಿರುವುದನ್ನು ವಿರೋಧಿಸಿ ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಬುಧವಾರ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಕಳೆದ ಕೆಲ ದಿನಗಳಿಂದ ಪಟ್ಟಣದಲ್ಲಿ ಹಗಲು ರಾತ್ರಿ ಎನ್ನದೇ ಲೋಡ್ ಶೆಡ್ಡಿಂಗ್ ನೆಪದಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಉದ್ಯಮಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಎಂಜಿನಿಯರ್ ವೇಣುಗೋಪಾಲ್, ಲೋಡ್‌ಶೆಡ್ಡಿಂಗ್ ಕ್ರಮವನ್ನು ಸಡಿಲಗೊಳಿಸುವುದು ನಿಗಮದ ಹಿರಿಯ ಅಧಿಕಾರಿಗಳ ವ್ಯಾಪ್ತಿಗೆ ಬರುತ್ತದೆ. ಇಲ್ಲಿನ ಸಮಸ್ಯೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಮೋಟರ್ ಯೂನಿಯನ್ ಅಧ್ಯಕ್ಷ ಮಧು, ಕಾರ್ಯದರ್ಶಿ ರವಿ, ಪದಾಧಿಕಾರಿಗಳಾದ ಶೇಖರ್, ಸಿ.ಸಿ.ನಂದಕುಮಾರ್, ಇಬ್ರಾಹಿಂ, ಹೆತ್ತೂರು ರಾಜಣ್ಣ, ರಾಘವ, ಬಾಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT