ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

Last Updated 17 ಸೆಪ್ಟೆಂಬರ್ 2011, 6:55 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಈಚೆಗೆ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬಗಳು, ಜೋತು ಬಿದ್ದ ವಿದ್ಯುತ್ ತಂತಿಗಳು ಹಗೂ ಸುಟ್ಟ ಪರಿವರ್ತಕಗಳ ಕುರಿತು ಸಮೀಕ್ಷೆ ನಡೆಸಿ ಕೂಡಲೇ ಹೊಸ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಬೇಕು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಅಸಮರ್ಪಕವಾಗಿದ್ದು ರೈತರಿಗೆ ತೊಂದರೆಯಾಗುತ್ತಿದೆ. ಪೂರ್ಣಪ್ರಮಾಣದ ವೋಲ್ಟೇಜ್ ಇರುವ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿರುವ ಓವರ್‌ಹೆಡ್ ಟ್ಯಾಂಕ್‌ಗಳಿಗೆ ನೀರು ಪೂರೈಕೆ ಇಲ್ಲ. ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆ ಇದ್ದರೂ ವಾಟರ್‌ಮನ್‌ಗಳ ಕೊರತೆಯಿಂದ ನೀರು ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ವಿವಿಧ ಬೇಡಿಕೆಗಳ ಮನವಿಯನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಿಶ್ವನಾಥರೆಡ್ಡಿ ಜೀನೂರು, ತಾಲ್ಲೂಕು ಘಟಕದ ಅಧ್ಯಕ್ಷ ಯಂಕಪ್ಪ ಕಾರಬಾರಿ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ್, ಪದಾಧಿಕಾರಿಗಳಾದ ಬಸವರಾಜಪ್ಪ ನೀರಮಾನ್ವಿ, ಜಗದೀಶಯ್ಯಸ್ವಾಮಿ ಮಲ್ಲಿಗೆಮಡುವು, ಹಂಪಣ್ಣ ಜಾನೇಕಲ್, ವಿ.ಭೀಮೇಶ್ವರರಾವ್, ವೆಂಕಟರೆಡ್ಡಿ ರಾಜಲಬಂಡಾ, ನಾಲಾಜಿ ಜೀನೂರು ಕ್ಯಾಂಪ್, ಹನುಮಂತ ರಾಜಲಬಂಡಾ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT