ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ

Last Updated 23 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್ ಕ್ಷಾಮ ಪರಿಹರಿಸುವಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಈ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ವಿದ್ಯುತ್ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ರ‌್ಯಾಲಿಯಲ್ಲಿ ಮಾತನಾಡಿದ ಅವರು, `ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು~ ಎಂದು ಒತ್ತಾಯಿಸಿದರು.

ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಟೀಕಿಸಿದ ದೇವೇಗೌಡರು, ಈ ಸಮಸ್ಯೆಗೆ ಹಿಂದಿನ ಕಾಂಗ್ರೆಸ್ ಸರ್ಕಾರವೂ ಕಾರಣ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ, `ವಿದ್ಯುತ್ ಕೊರತೆ ಮತ್ತು ಬರ ಪರಿಹಾರ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು~ ಎಂದು ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದವರು ಸಾಲಾಗಿ ಜೈಲು ಸೇರುತ್ತಿದ್ದಾರೆ. ಹೀಗಾಗಿ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆ ಪರಪ್ಪನ ಅಗ್ರಹಾರದಲ್ಲೇ ನಡೆಯುವ ಸಾಧ್ಯತೆಗಳಿವೆ ಎಂದು ಛೇಡಿಸಿದರು.

`ನಾನು ಇಂಧನ ಸಚಿವನಾಗಿದ್ದಾಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) 500 ಕೋಟಿ ರೂಪಾಯಿ ಠೇವಣಿ ಹೊಂದಿತ್ತು. ಈಗ ಅದೇ ಕಂಪೆನಿ 1,500 ಕೋಟಿ ರೂಪಾಯಿ ಸಾಲ ಹೊತ್ತಿದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT