ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಪೂರೈಕೆ ವ್ಯತ್ಯಯ ಇಲ್ಲ: ಸಚಿವೆ ಭರವಸೆ

Last Updated 31 ಮಾರ್ಚ್ 2011, 19:05 IST
ಅಕ್ಷರ ಗಾತ್ರ

ರಾಜರಾಜೇಶ್ವರಿ ನಗರ:  ‘ವಿದ್ಯಾರ್ಥಿಗಳಿಗೆ ಈಗ ಪರೀಕ್ಷಾ ಕಾಲವಾದದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಿ’ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂಬಿಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಈ ಸೂಚನೆ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು ಆಗಮಿಸಿದಾಗ ಸ್ಥಳೀಯರು ವಿದ್ಯುತ್ ಪೂರೈಕೆಯಲ್ಲಾಗುತ್ತಿರುವ ವ್ಯತ್ಯಯ ಕುರಿತು ಗಮನಕ್ಕೆ ತಂದರು. ಇದಕ್ಕೆ ಪ್ರತಿಯಾಗಿ ಸಚಿವರು, ಇನ್ನು ಮುಂದೆ ಯಾವುದೇ ರೀತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ಜಿ.ಪಂ. ಸದಸ್ಯೆ ಸರ್ವಮಂಗಳ ಕೃಷ್ಣಪ್ಪ, ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯ ವಿ.ವೇಣುಗೋಪಾಲ್, ತಾ.ಪಂ. ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ, ಜಿ.ಪಂ.ಸಹಾಯಕ ಕಾರ್ಯಪಾಲಕ ಎಂಜಿನೀಯರ್ ಎಂ.ನಾಗರಾಜ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಎಸ್.ಕೆ. ಬಾಬು, ತಾ.ಪಂ.ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ, ಕ್ಷೇತ್ರದ ಯುವಮೋರ್ಚಾ ಬಿಜೆಪಿ ಅಧ್ಯಕ್ಷ ಜೆ.ರಮೇಶ್, ಪುರಸಭೆ ಮಾಜಿ ಸದಸ್ಯ ಸತ್ಯನಾರಾಯಣ, ಮುಖಂಡ ಸಿ.ಎಂ.ಮಾರೇಗೌಡ, ಗ್ರಾ.ಪಂ. ಉಪಾಧ್ಯಕ್ಷರಾದ ಸೈಯಿದಾ ಬಾನು, ತಮ್ಮಯ್ಯ, ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆರ್.ಪಿ.ಪ್ರಕಾಶ್, ಪಾಲಿಕೆ ಸದಸ್ಯ ಆಂಜನಪ್ಪ ಮತ್ತಿ       ತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT