ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಸಮಸ್ಯೆಗೆ ಆಡಳಿತ ವೈಫಲ್ಯ ಕಾರಣ

Last Updated 4 ಅಕ್ಟೋಬರ್ 2011, 8:45 IST
ಅಕ್ಷರ ಗಾತ್ರ

ಮಾನ್ವಿ: ಅಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಸಿದಂತೆ ಸೋಮವಾರ ಕಾತರಕಿ ಭಾಗದ ರೈತರು ಶಾಸಕ ಜಿ.ಹಂಪಯ್ಯ ನಾಯಕ ಹಾಗೂ ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ನೇತೃತ್ವದಲ್ಲಿ ಕೆಪಿಟಿಸಿಎಲ್ ಹಾಗೂ ಜೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
 
ಈ ಸಂದರ್ಭದಲ್ಲಿ ಕಾತರಕಿ, ಮದ್ಲಾಪುರ,ಚೀಕಲಪರ್ವಿ, ದದ್ದಲ ಭಾಗದ ರೈತರ ಅನುಕೂಲಕ್ಕಾಗಿ ಕಾತರಕಿ ಹತ್ತಿರದ ವಿದ್ಯುತ್ ವಿತರಣಾ ಕೇಂದ್ರದಿಂದ  ಎರಡು ಫೀಡರ್‌ಗಳಿಗೆ ಪ್ರತಿದಿನ ತಲಾ ನಾಲ್ಕು ತಾಸು ವಿದ್ಯುತ್ ಪೂರೈಕೆಗೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್.ಬೋಸರಾಜು, ವಿದ್ಯುತ್ ಸಮಸ್ಯೆಯಿಂದ ಜಿಲ್ಲೆಯ ಜನತೆ, ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಜಿ.ಹಂಪಯ್ಯ ನಾಯಕ, ಆರ್.ತಿಮ್ಮಯ್ಯ ಶೆಟ್ಟಿ, ಹನುಮೇಶ ಮದ್ಲಾಪುರ, ರಾಜಾ ವಸಂತ ನಾಯಕ, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ನಾಯಕ, ಅಧ್ಯಕ್ಷ ಅಯ್ಯನಗೌಡ ಜಂಬಲದಿನ್ನಿ, ಮಹಾಂತೇಶಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT