ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದಲ್ಲಿ ಸಚಿವ ಸೋಮಣ್ಣ ಮೇಲೆ ಹಲ್ಲೆ

Last Updated 1 ಅಕ್ಟೋಬರ್ 2011, 6:55 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಖಾತೆ ಸಚಿವ ವಿ. ಸೋಮಣ್ಣ ಅವರ ಮೇಲೆ  ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದ್ದು, ಹಲ್ಲೆ ನಡೆಸಿದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಎಂದಿನಂತೆ ವಿಧಾನ ಸೌಧದ ಮೂರನೇಯ ಮಹಡಿಯಲ್ಲಿರುವ ತಮ್ಮ ಅಧಿಕೃತ ಕಚೇರಿಗೆ ಸೋಮಣ್ಣ ಶನಿವಾರ ಆಗಮಿಸಿದ ಕೆಲ ಸಮಯದಲ್ಲಿ ಈ ಘಟನೆ ಜರುಗಿದೆ.

ಹಲ್ಲೆ ನಡೆಸಿ ಸಧ್ಯ ಪೊಲೀಸರ ವಶದಲ್ಲಿರುವ ವ್ಯಕ್ತಿಯನ್ನು ಹೆಬ್ಬಾಳ ಮತಕ್ಷೇತ್ರದ ಗಂಗೇನ ಹಳ್ಳಿಯ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ.
 
ಸೋಮಣ್ಣ ಮೇಲೆ ಹಲ್ಲೆ ನಡೆಸುವ ವೇಳೆ ಪ್ರಸಾದ್ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡನಲ್ಲದೇ, ಬಿಜೆಪಿಯಿಂದ ತನಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
 
ಪೊಲೀಸರ ವಶದಲ್ಲಿರುವ ಪ್ರಸಾದ್‌ನನ್ನು ತಪಾಸಣೆ ಮಾಡಿದ ವೇಳೆ ಅವನ ಬಳಿ ಚಾಕು ಇರಿಸಿಕೊಂಡಿದ್ದು ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT