ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಭೂತಿಪುರ ಸಮುದಾಯ ಭವನ ಸಾರ್ವಜನಿಕರಿಗೆ ಮುಕ್ತ: ಭರವಸೆ

Last Updated 6 ಅಕ್ಟೋಬರ್ 2012, 19:25 IST
ಅಕ್ಷರ ಗಾತ್ರ

ಕೃಷ್ಣರಾಜಪುರ: `ವಿಭೂತಿಪುರ ಸಮುದಾಯ ಭವನಕ್ಕೆ ಹಾಕಿರುವ ಬೀಗವನ್ನು 15 ದಿನಗಳ ಒಳಗೆ ತೆಗೆಸಿ, ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿಗೆ ಚಾಲನೆ ನೀಡಲಾಗುವುದು~ ಎಂದು ಶಾಸಕ ಎನ್.ಎಸ್.ನಂದೀಶ್ ರೆಡ್ಡಿ ಅವರು ನಿವಾಸಿಗಳಿಗೆ ಭರವಸೆ ನೀಡಿದರು.

ಸಮೀಪದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ 32 ಲಕ್ಷ ರೂಪಾಯಿ ವೆಚ್ಚದಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ಕಾಂಕ್ರೆಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ವಾರ್ಡ್ ಸಭೆಯಲ್ಲಿ  ಅವರು ಮಾತನಾಡಿದರು.

`ನಾಲ್ಕು ವರ್ಷಗಳಿಂದ ಸಮುದಾಯ ಭವನಕ್ಕೆ ಬೀಗ ಹಾಕಲಾಗಿದೆ. ಸಮುದಾಯ ಭವನವನ್ನು ಆದಷ್ಟು ಬೇಗ ಸಾರ್ವಜನಿಕ ಚಟುವಟಿಕೆಗಳಿಗಾಗಿ ಮುಕ್ತಗೊಳಿಸಲಾಗುವುದು~ ಎಂದು ಅವರು ತಿಳಿಸಿದರು.

`ಈ ಭಾಗದಲ್ಲಿ ಒಳಚರಂಡಿ ಮತ್ತು ಕಾವೇರಿ ನೀರು ಪೂರೈಕೆ ಕಾಮಗಾರಿ ಮುಗಿದಿದೆ. 4ನೇ ಹಂತದ 2ನೇ ಘಟ್ಟದ ಯೋಜನೆಗೆ 3,300 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಾವೇರಿ ನೀರನ್ನು ನವೆಂಬರ್ ಮೊದನೇ ವಾರ ಕ್ಷೇತ್ರ ವ್ಯಾಪ್ತಿಯಲ್ಲಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ನಿಗದಿತ ಶುಲ್ಕ ಮತ್ತು ಬಹುಮಹಡಿ ಕಟ್ಟಡಗಳಿಗೆ ವಿಧಿಸಿರುವ ಶುಲ್ಕವನ್ನು ಪುನರ್ ಪರಿಶೀಲನೆ ಮಾಡಲು ಈ ಹಂತದಲ್ಲಿ ಸಾಧ್ಯವಿಲ್ಲ~ ಎಂದು ತಿಳಿಸಿದರು.

ಬಿಬಿಎಂಪಿ ಸದಸ್ಯ ಸಿದ್ಧಲಿಂಗಯ್ಯ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭೀಮೇಶ್, ಶ್ರೀನಿವಾಸ್, ಮುನಿಯಪ್ಪ, ಮುಖಂಡ ವಿವೇಕಾನಂದ ಬಾಬು, ಸುನೀಲ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT