ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು: ಇಂದು ನಿರ್ಧಾರ?

Last Updated 16 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಹುದಿನಗಳ ಬೇಡಿಕೆಯಾದ ದೇವನಹಳ್ಳಿ ಬಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡರ ಹೆಸರು ನಾಮಕರಣ ಮಾಡುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವಾಲಯ ಪ್ರಸ್ತಾಪ ಸಲ್ಲಿಸಿರುವುದರಿಂದ ಬುಧವಾರ ಕೇಂದ್ರ ಸಂಪುಟ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವ ವಿಷಯ ಬುಧವಾರ ಸಭೆ ಸೇರಲಿರುವ ಸಂಪುಟದ ಮುಂದೆ ಬರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೆಂಪೇಗೌಡ ಅವರ 503ನೇ ಜಯಂತಿ ಆಚರಣೆಯ ನಂತರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ `ಬೆಂಗಳೂರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ಒತ್ತಡ ತರಲಾಗಿತ್ತು.

ಮರುನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಕಳೆದ ವರ್ಷ ಸಲ್ಲಿಸಿದ ಪ್ರಸ್ತಾವವನ್ನು ವಿಮಾನಯಾನ ಸಚಿವಾಲಯ ಒಪ್ಪಿತ್ತು. ಈ ಸಂಬಂಧ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೂ ಒತ್ತಡ ಹೇರಿದ್ದರು. ಆದರೆ ಕೆಲ ಸಂಘಟನೆಗಳು ಈ ಸಂಬಂಧ ಅಪಸ್ವರ ಎತ್ತಿದ್ದು ದೇವನಹಳ್ಳಿಯಲ್ಲೇ ಜನಿಸಿದ ಟಿಪ್ಪು ಸುಲ್ತಾನ್, ಸಮಾನತೆಯ ಹರಿಕಾರ ಬಸವಣ್ಣ ಇಲ್ಲವೇ ಶ್ರೇಷ್ಠ ಎಂಜಿನಿಯರ್ ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT