ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಇಂದು

Last Updated 17 ಡಿಸೆಂಬರ್ 2012, 7:23 IST
ಅಕ್ಷರ ಗಾತ್ರ

ಸವಣೂರು: ಶಾಶ್ವತವಾದ ಕುಡಿಯುವ ನೀರು ಪೂರೈಕೆ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಡಿ. 17ರಂದು ಮಧ್ಯಾಹ್ನ 1ಗಂಟೆಗೆ ನಡೆಯಲಿವೆ. ತಾ.ಪಂ. ಸಭಾಭವನದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಕುರಿತು ವಿವರಿಸಿದರು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ಪುರಸಭೆ ಸಹಯೋಗದಲ್ಲಿ ಸವಣೂರಿಗೆ ಶಾಶ್ವತ ಕುಡಿಯುವ ನೀರು ಪೂರೈಸುವ ಯೋಜನೆ ಉದ್ಘಾಟನೆಗೊಳ್ಳಲಿದೆ. ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಮೂಲ  ಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ 18ಕೋಟಿ ಅನುದಾನದಲ್ಲಿ ಸವಣೂರ ನಗರಕ್ಕೆ ವರದಾ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆ ಸಮರ್ಪಣೆಗೊಳ್ಳಲಿದೆ ಎಂದರು.

ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧ ಕಟ್ಟಡದ ಮೊದಲನೇ ಮಹಡಿ ಕಟ್ಟಡ, ತಾಲೂಕು ಪಂಚಾಯಿತಿ ಆವರಣದಲ್ಲಿ ರೂ 37 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಸಾಮರ್ಥ್ಯ ಸೌಧ ಕಟ್ಟಡ ಹಾಗೂ ರೂ 1.10 ಕೋಟಿ ಮೊತ್ತದಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಉದ್ಘಾಟನೆ  ನೆರವೇರಲಿದೆ.

ಸವಣೂರಿನ ಖಾದರಭಾಗ ಮತ್ತು ರಾಮದೇವ ಓಣಿಯಲ್ಲಿ ರೂ 3.75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಕಟ್ಟಡ ಕಾಮಗಾರಿ, ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ರೂ 25ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ತಹಶೀಲ್ದಾರರು ತಿಳಿಸಿದರು. 

ಕಾರ್ಯಕ್ರಮದ ಅಡಿ ಕೃಷಿ ಇಲಾಖೆಯ ಸುವರ್ಣ ಭೂಮಿ ಯೋಜನೆಯ ಫಲಾನುಭವಿಗಳಿಗೆ ಸಹಾಯ ಧನದ ಚೆಕ್ ವಿತರಣೆ ಕೈಗೊಳ್ಳಲಾಗುತ್ತದೆ. ವರದಾ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಗೆ ಹಾಗೂ ಮಿನಿ ವಿಧಾನಸೌಧ ಕಟ್ಟಡದ ಮೊದಲನೇ ಮಹಡಿ ಕಟ್ಟಡದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೆರವೇರಿಸಲಿದ್ದಾರೆ.

ಮೇಲ್ದರ್ಜೆಗೆ ಏರಿಸಿದ ತಾಲ್ಲೂಕ ಮಟ್ಟದ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಸಾಮರ್ಥ್ಯಸೌಧ ಕಟ್ಟಡ ಉದ್ಘಾಟನೆ ಹಾಗೂ  ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ, ಅಂಗನವಾಡಿ ಕಟ್ಟಡ ಮತ್ತು ಫಲಾನುಭವಿಗಳಿಗೆ ಚೆಕ್ ವಿತರಣೆಯನ್ನು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮೋಯಿ ಕೈಗೊಳ್ಳಲಿದ್ದಾರೆ.

ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ. ಉದಾಸಿ, ಜಿ.ಪಂ.ಅಧ್ಯಕ್ಷ ಶಂಕ್ರಣ್ಣ ಮಾತನವರ, ಸಂಸದರಾದ ಪ್ರಹ್ಲಾದ ಜೋಶಿ, ಶಿವಕುಮಾರ ಉದಾಸಿ, ಹಾವೇರಿ ಶಾಸಕ ನೆಹರೂ ಓಲೇಕಾರ, ವಿಧಾನಪರಿಷತ್ ಸದಸ್ಯರಾದ ಸೋಮಣ್ಣ ಬೇವಿನಮರದ, ಬಸವರಾಜ ಹೊರಟ್ಟಿ, ಶಿವರಾಜ ಸಜ್ಜನರ, ಮೋಹನ ಲಿಂಬಿಕಾಯಿ, ಶ್ರೀನಿವಾಸ ಮಾನೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ ಸಿಂಧೂರ, ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಭೋಜರಾಜ ಕರೂದಿ, ತಾ.ಪಂ. ಅಧ್ಯಕ್ಷ ರುದ್ರಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಶಂಕ್ರಣ್ಣ ದೊಡ್ಡಮನಿ, ಜಿ.ಪಂ. ಸದಸ್ಯರಾದ ಶೋಭಾ ನಿಸ್ಸೀಮಗೌಡ್ರ, ಸಾವಿತ್ರವ್ವ ತಳವಾರ, ಕೃಷ್ಣಪ್ಪ ಸುಣಗಾರ, ಜಿಲ್ಲಾಧಿಕಾರಿ ಹೆಚ್.ಜಿ.ಶ್ರೀವರ, ಪೊಲೀಸ ವರಿಷ್ಠಾಧಿಕಾರಿ ಚೇತನಸಿಂಗ್ ರಾಠೋರ, ಜಿ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್, ಲೋಕೋಪಯೋಗಿ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಕೆ. ಶಿವಣ್ಣ ಆಗಮಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT