ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಡಾ.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ

Last Updated 7 ಡಿಸೆಂಬರ್ 2012, 6:52 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಕೋಟೆ ವಿಧಾನ ಸಭಾಂಗಣದಲ್ಲಿ ಗುರುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 57ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಅಣ್ಣಿಗೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಬಿ. ಅಂಜನಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಲಕ್ಷ್ಮಣ.ಜೆ. ಗಂಟಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಬಿಳಿಕೆಂಚಪ್ಪ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯ ಸಹಾಯಕ ನಿರ್ದೇಶಕರಾದ ಲಿಂಗರಾಜು ಮತ್ತಿತರರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಹಲವು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
12ರಂದು ಪರಿನಿರ್ವಾಣ ದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೋಮವಾರಪೇಟೆ ತಾಲ್ಲೂಕಿನ ಶಿವಕುಮಾರ ಸ್ವಾಮೀಜಿ ಪ್ರೌಢಶಾಲೆ, ಕಲ್ಮಠ, ದೊಡ್ಡಕೊಡ್ಲಿ ಇವರ ಸಂಯುಕ್ತ ಆಶ್ರಯದಲ್ಲಿ ಡಿ.12 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಶಿವಕುಮಾರ ಸ್ವಾಮೀಜಿ ಪ್ರೌಢಶಾಲೆ, ಕಲ್ಮಠ, ದೊಡ್ಡಕೊಡ್ಲಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ ಕಾರ್ಯಕ್ರಮ ನಡೆಯಲಿದೆ.

ಸೋಮವಾರಪೇಟೆ ತಾಲ್ಲೂಕಿನ ಕಲ್ಮಠ ದೊಡ್ಡಕೊಡ್ಲಿಯ ಮಹಾಂತ ಸ್ವಾಮೀಜಿ ಶಿವಕುಮಾರ ಸ್ವಾಮೀಜಿ, ಕಾರ್ಯದರ್ಶಿ ದಿವಾಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ವಿ. ಇಂದ್ರಮ್ಮ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಅಂಬೇಡ್ಕರ್ ಪ್ರತಿಮೆಗೆ ಗೌರವ
ಸೋಮವಾರಪೇಟೆ: ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಗುರುವಾರ ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಪಟ್ಟಣ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಧ್ಯಕ್ಷ ಎನ್.ಎಸ್. ಮೂರ್ತಿ, ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಕೊಡಗು ದಲಿತ ಸೇನೆಯ ಪದಾಧಿಕಾರಿಗಳು ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಪ್ರಮುಖರಾದ ಜಯಪ್ಪ ಹಾನಗಲ್, ಟಿ.ಇ. ಸುರೇಶ್, ಮಹೇಶ್ ಹಾಜರಿದ್ದರು.

`ಅಂಬೇಡ್ಕರ್ ನಮನ' ಕಾರ್ಯಕ್ರಮ
ವಿರಾಜಪೇಟೆ: ಶ್ರೇಷ್ಠ ಸಂವಿಧಾನ ರಚಿಸುವ ಮೂಲಕ ಅಂಬೇಡ್ಕರ್ ದೇಶಕ್ಕೆ ಹೊಸ ರೂಪು ನೀಡಿದರು ಎಂದು ಬಾಳೆಲೆಯ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಜೆ.ಸೋಮಣ್ಣ ಹೇಳಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 56ನೇ ಪರಿ ನಿರ್ವಾಣದ ಅಂಗವಾಗಿ ಹಮ್ಮಿಕೊಂಡಿದ್ದ `ಅಂಬೇಡ್ಕರ್ ನಮನ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಅಸ್ಪೃಶ್ಯತೆ ತೊಲಗಿಸಿ, ನ್ಯಾಯ, ಸಮಾನತೆಯ ಹೋರಾಟಕ್ಕಾಗಿ ಸೇವೆಯನ್ನು ಮುಡುಪಾಗಿಟ್ಟ ಅಂಬೇಡ್ಕರ್ ಮಹಾ ಮಾನವತಾವಾದಿ ಎಂದರು.

ಸಾಮಾಜಿಕ ಪರಿವರ್ತನಾ ಚಳವಳಿ ಹೋರಾಟಗಾರ ಎಚ್.ಆರ್. ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ
ಹಿರಿಯ ಉಪನ್ಯಾಸಕ ಅಂತೋಣಿ ವಿವಿಯನ್ ಆಳ್ವಾರೀಸ್, ಉಪನ್ಯಾಸಕ ಚಾರ್ಲ್ಸ್ ಡಿಸೋಜ, ಅತಿಥಿಗಳಾದ ಆರ್, ಅರ್ಜುನ್ ಮಾತನಾಡಿದರು. ಪ್ರಾಂಶುಪಾಲ ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ನಾಯಕ ಅಭಿಜಿತ್ ಸ್ವಾಗತಿಸಿದರು. ಶಿಕ್ಷಕಿ ಗೌರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT