ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

Last Updated 6 ಜೂನ್ 2011, 7:10 IST
ಅಕ್ಷರ ಗಾತ್ರ

ರಾಯಚೂರು: ಮಾನವನ ಸ್ವಾರ್ಥಕ್ಕೆ ಪರಿಸರ ಬಲಿಕೊಡಬಾರದು. ಪರಿಸರ ನಾಶ ಮಾಡುವಂಹ ಕಾರ್ಯವನ್ನು ಸ್ಥಗಿತಗೊಳಿಸಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬ ಗಮನಹರಿಸಬೇಕು. ಪರಿಸರ ನಾಶದಿಂದ ಮಾನವ ವಿನಾಶ ಎನ್ನುವ ಸಂಗತಿಯ ಬಗ್ಗೆ ಎಚ್ಚರಿಕೆ ವಹಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ನಾಗರಾಜ ಬಿ.ಕುಲಕರ್ಣಿ ತಿಳಿಸಿದರು.

ಇಲ್ಲಿನ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಡಳಿತ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ, ಗ್ರಾಮವಿಕಾಸ ಹಾಗೂ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪರಿಸರ ನಾಶ ನಿಲ್ಲಿಸದೇ ಇದ್ದಲ್ಲಿ ಮುಂದಿನ ಪೀಳಿಗೆಗೆ ಅಪಾಯವನ್ನು ಸೃಷ್ಟಿ ಮಾಡಿದಂತಾಗುತ್ತದೆ. ಹಿಂದಿನ ಹಾಗೂ ಸದ್ಯದ ಪರಿಸರ ಬಗ್ಗೆ ವ್ಯತ್ಯಾಸವನ್ನು ಅವಲೋಕಿಸಿದಾಗ ನಾವು ಎಷ್ಟೊಂದು ಪರಿಸರವನ್ನು ನಾಶಪಡಿಸಿರುವ ಬಗ್ಗೆ ಸ್ಪಷ್ಟವಾಗುತ್ತದೆ.

ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ವನ್ಯಪ್ರಾಣಿಗಳ ವಧೆ ನಿರಂತರವಾಗಿ ನಡೆಯುತ್ತಿದ್ದು, ಇವುಗಳ ತಡೆಗಟ್ಟುವಂತ ಮನೋಭಾವನೆ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ ಮಾತನಾಡಿ, ಪರಿಸರ ಸಂರಕ್ಷಣೆಯ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬರು  ಒಂದೊಂದು ಮರ ಬೆಳೆಸುವಂತಹ ಜವಾಬ್ದಾರಿ ವಹಿಸಿಕೊಂಡಾಗ ಮಾತ್ರ ಉತ್ತಮ ಪರಿಸರ ಸಂರಕ್ಷಣೆಯಾಗಲು ಸಾಧ್ಯ ಎಂದರು.

ನ್ಯಾಯಾಧೀಶಗಳಾದ ಜಿ.ಎ ಮೂಲಿಮನಿ,ಜೀವನರಾವ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ಭಾನುರಾಜ ವಕೀಲ, ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಪ್ರೊ.ಸಿ.ಡಿ ಪಾಟೀಲ್, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಅಧಿಕಾರಿ ಎಸ್.ದಿನೇಶ್, ಸುರೇಶ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪರಿಮಳ ದೀಕ್ಷಿತ ನಿರೂಪಿಸಿದರು. ಉಪಪ್ರಾಧ್ಯಾಪಕ ರವೀಂದ್ರ ಕಡಗದ ವಂದಿಸಿದರು.

ಮಾನ್ವಿ: ಪಟ್ಟಣದ ರಾಷ್ಟ್ರಕವಿ ಕುವೆಂಪು ಸಾಂಸ್ಕೃತಿಕ ಹಾಗೂ ಸಾಮಾಜಿಕ ಪ್ರತಿಷ್ಠಾನದ ವತಿಯಿಂದ  ಭಾನುವಾರ ಕೋನಾಪುರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ನಾಯಕ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಜಾಗೃತಿ ಮೂಡಿಸಲು  ನೆರವಾಗುವಂತಹ ಚಟುವಟಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ರಾಮಚಂದ್ರಪ್ಪ `ಪರಿಸರ ಸಂರಕ್ಷಣೆಯ ಮಹತ್ವ~ ಕುರಿತು ಉಪನ್ಯಾಸ ನೀಡಿದರು.ಪ್ರೌಢಶಾಲೆಯ ಮುಖ್ಯ ಗುರು ರಾಘವೇಂದ್ರರಾವ್ ಅಧ್ಯಕ್ಷತೆವಹಿಸಿದ್ದರು.

ತಹಸೀಲಾರ್ ಸೋಮಲಿಂಗ ಜಿ.ಗೆಣ್ಣೂರು, ವಲಯ ಅರಣ್ಯಾಧಿಕಾರಿ ಎಸ್.ಕೆ.ಕಾಂಬ್ಳೆ, ಶಿಕ್ಷಣ ಸಂಯೋಜಕ ಸೂರ್ಯಕಾಂತ ಬಾರಕೇರ, ನಿವೃತ್ತ ಶಿಕ್ಷಣಾಧಿಕಾರಿ ಡಿ.ಜಿ.ಕರ್ಕಿಹಳ್ಳಿ, ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ  ಸೈಯದ್ ತಾಜುದ್ದೀನ್, ಕುವೆಂಪು ಪ್ರತಿಷ್ಠಾನದ ಸದಸ್ಯರಾದ ಸತ್ಯನಾರಾಯಣ ನಾಯಕ, ವೈ.ಶ್ರೀನಿವಾಸ, ಯಲ್ಲಪ್ಪ ನಿಲೋಗಲ್, ನಾಗರಾಜ ರಬ್ಬಣಕಲ್ ಉಪಸ್ಥಿತರಿದ್ದರು.  ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವುದು ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಲಿಂಗಸುಗೂರ: ಪರಿಸರ ಸಂರಕ್ಷಣೆಗೆ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರಾಜ್ಯದ ಇತರೆ ಪ್ರದೇಶಗಳಲ್ಲಿ ಪರಿಸರ ಸಂರಕ್ಷಣೆಗೆ ಸಾರ್ವಜನಿಕರು ಸಾಕಷ್ಟು ಸಹಕಾರ ನೀಡುತ್ತ ಬಂದಿದ್ದಾರೆ. ಆದರೆ, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪರಿಸರ ಸಂರಕ್ಷಣೆಗೆ ಅಷ್ಟೊಂದು ಸ್ಪಂದನೆ ಕಾಣುತ್ತಿಲ್ಲ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ಕಣುಮಯ್ಯ ಪ್ರತಿಪಾದಿಸಿದರು.

ಭಾನುವಾರ ಪಟ್ಟಣದ ಜಿಟಿಟಿಸಿ ಕಾಲೇಜು ಆವರಣದಲ್ಲಿ ವಕೀಲರ ಸಂಘ, ಕಾನೂನು ಸೇವಾ ಸಮಿತಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆ ಇರುವುದರಿಂದ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ರಾಜಶೇಖರ, ಆಶಿಕ್‌ಹ್ಮದ ವಕೀಲ, ಪ್ರಾಚಾರ್ಯ ಮಾರುತಿ ಭಜಂತ್ರಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಸಸಿ ನಾಟಿ ಮಾಡುತ್ತ ಬರಲಾಗುತ್ತದೆ. ಆದಗ್ಯೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಲಾಗಿಲ್ಲ. ಅರಣ್ಯ ಸಂರಕ್ಷಣೆ ಮಾಡುವುದರಿಂದ ನೈಸರ್ಗಿಕ ಲಾಭಗಳು ಸಮಾಜಕ್ಕೆ ಹೆಚ್ಚಾಗಿ ದೊರಕುತ್ತವೆ ಎಂಬಿತ್ಯಾದಿ ವಿಷಯಗಳ ಕುರಿತು ವಿವರಣೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಭೂಪನಗೌಡ ಕರಡಕಲ್ಲ, ಅರಣ್ಯಾಧಿಕಾರಿಗಳಾದ ದೇವಪುತ್ರಪ್ಪ, ಸಮುದಾನಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT