ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್ ಲಂಕಾ ಕೈತಪ್ಪಿದ್ದಕ್ಕೆ ಇಬ್ಬರು ಅಭಿಮಾನಿಗಳು ಆತ್ಮಹತ್ಯೆ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಶ್ರೀಲಂಕಾ ತಂಡ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಸೋಲಕಂಡಿದ್ದಕ್ಕೆ ಈ ದೇಶದ ಇಬ್ಬರು ಕ್ರಿಕೆಟ್ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.17ರ ಹರೆಯದ ಆಶನ್ ಲಕ್ಷಿತಾ ಹಾಗೂ 21 ವರ್ಷ ವಯಸ್ಸಿನ ಮಹೇಂದ್ರನ್ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ಕ್ರಿಕೆಟ್ ಪ್ರೇಮಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಗಾಲ್ ನಗರದಲ್ಲಿ ಹಾಕಲಾಗಿದ್ದ ದೊಡ್ಡ ಪರದೆ ಮೇಲೆ ಕ್ರಿಕೆಟ್ ವೀಕ್ಷಿಸಿದ ಲಕ್ಷಿತಾ ಮನೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್‌ಇಂಡೀಸ್ ವಿರುದ್ಧದ ಫೈನಲ್‌ನಲ್ಲಿ ಸಿಂಹಳೀಯ ತಂಡ 36 ರನ್‌ಗಳಿಂದ ಸೋಲು ಕಂಡಿತ್ತು. ಹಾಗಾಗಿ ಚುಟುಕು ವಿಶ್ವಕಪ್ ಗೆಲ್ಲುವ ಕನಸು ನುಚ್ಚು ನೂರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT