ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಆಗ್ರಹ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜ ದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ  ಅನುದಾನವನ್ನು ಮೀಸಲಿಡಬೇಕು ಎಂದು ಅಖಿಲ ಭಾರತ  ವಿಶ್ವಕರ್ಮ ಸಮಾಜದ  ಬೇಲಿ ಮಠ ಸಂಸ್ಥಾನದ ಮಹೇಂದ್ರ ಸ್ವಾಮೀಜಿ  ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 67 ಕ್ಕೂ ಹೆಚ್ಚು ವಿಶ್ವಕರ್ಮ ಮಠ ಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ವಾಗಿದೆ. ಇವುಗಳಿಗೆ ಆರ್ಥಿಕ ನೆರವು ನೀಡಬೇಕು. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಸಾರ್ವತ್ರಿಕ ರಜೆ ಮತ್ತು ಸರ್ಕಾರದಿಂದಲೇ ವಿಶ್ವಕರ್ಮ ಪೂಜಾ ಮಹೋತ್ಸವ ಆಚರಣೆ ಮಾಡಬೇಕು,  ಶಿಕ್ಷಣ ಸಂಸ್ಥೆಗಳ ನಿರ್ಮಾಣಕ್ಕೆ ಜಮೀನು, ಹಂಪಿ  ಕನ್ನಡ ವಿಶ್ವವಿದ್ಯಾಲಯದಲ್ಲಿ ಅಮರ ಶಿಲ್ಪಿ ಜಕಣಾಚಾರ್ಯರ ಅಧ್ಯಯನ ಪೀಠ ಸ್ಥಾಪಿಸುವಂತೆ ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT