ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ವಿಶ್ವಕರ್ಮರಿಗೆ ರಾಜಕೀಯ ಶಕ್ತಿ ಅಗತ್ಯ'

Last Updated 4 ಸೆಪ್ಟೆಂಬರ್ 2013, 5:39 IST
ಅಕ್ಷರ ಗಾತ್ರ

ಪಾಂಡವಪುರ: `ಅಧಿಕಾರಕ್ಕೆ ಬಂದ ಎಲ್ಲ ರಾಜಕೀಯ ಪಕ್ಷಗಳು ವಿಶ್ವಕರ್ಮ ಜನಾಂಗವನ್ನು ಕಡೆಗಣಿಸಿವೆ. ನಮ್ಮ ಹಕ್ಕುಗಳನ್ನು ಪಡೆಯಲು ರಾಜಕೀಯ ಪ್ರತಿನಿಧ್ಯ ಪಡೆಯಬೇಕು' ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಘಟಕ ಆಯೋಜಿಸಿದ್ದ ರಾಜ್ಯ ಮಟ್ಟದ 5ನೇ ವಿಶ್ವಕರ್ಮ ಜಯಂತ್ಯುತ್ಸವ ಆಚರಣೆಯ ಪೂರ್ವಭಾವಿ ಸಭೆಯನ್ನು ಉದ್ಫಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಜನಾಂಗದ ಏಳಿಗಾಗಿ ಹತ್ತಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿದರೂ ಪ್ರಯೋಜನ ವಾಗಿಲ್ಲ. ವಿಶ್ವಕರ್ಮ ಜಯಂತ್ಯುತ್ಸ ವವನ್ನು ಕಡೆಗಣಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಶ್ವಕರ್ಮರ ಹೋರಾಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ರೂ 5 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಮಾತನಾಡಿ, ವಿಶ್ವಕರ್ಮ ಜನಾಂಗದ ಉನ್ನತಿಗಾಗಿ ಸರ್ಕಾರ ಯೋಜನೆಗಳನ್ನು ರೂಪಿಸುವಂತೆ ಒತ್ತಾಯಿಸಲು ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು. ದುಡಿಯುವ ಸಮುದಾಯದ ರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕೆ.ಪಿ. ನಂಜುಂಡಿ ಅಭಿನಂದಾರ್ಹರು. ಅವರ ಹೋರಾಟಕ್ಕೆ ತಾವು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.

ಶಾಸಕ ಪುಟ್ಟಣ್ಣಯ್ಯ ಅವರನ್ನು ಕೆ.ಪಿ. ನಂಜುಂಡಿ ಅಭಿನಂದಿಸಿದರು. ಮನ್‌ಮುಲ್ ಮಾಜಿ ಅಧ್ಯಕ್ಷ ಕೆ. ವೈರಮುಡಿಗೌಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಡಿ. ಹುಚ್ಚೇಗೌಡ, ವಿಶ್ವಕರ್ಮ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಸತೀಶ್, ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜು, ಕಾರ್ಯದರ್ಶಿ ಎಸ್. ಶಿವಕುಮಾರ್, ಹೋಬಳಿ ಅಧ್ಯಕ್ಷರಾದ ನಾಗಣ್ಣಚಾರ್, ಸುರೇಶ್, ನರಸಿಂಹ, ಪುರುಷೋತ್ತಮಚಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT