ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವರೂಪಂ ನಿಷೇಧ: ಜಯಾ ಸಮರ್ಥನೆ

Last Updated 31 ಜನವರಿ 2013, 9:51 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಶ್ವರೂಪಂ ಚಿತ್ರವನ್ನು ನಿಷೇಧಿಸಬೇಕಾಯಿತು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಕಮಲ್ ಹಾಸನ್ ಅವರ ವಿಶ್ವರೂಪಂ ಚಿತ್ರ ನಿಷೇಧದ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಲಲಿತಾ ಚಿತ್ರದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದು, ರಾಜ್ಯದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಚಿತ್ರವನ್ನು ನಿಷೇಧಿಸಬೇಕಾಯಿತು ಎಂದರು.

ಪೊಲೀಸ್ ಸಿಬ್ಬಂದಿ ಕೊರತೆ ಇರುವುದರಿಂದ ಎಲ್ಲಾ ಚಿತ್ರಮಂದಿರಗಳಿಗೂ ಪೊಲೀಸ್ ಭದ್ರತೆ ನೀಡಲು ಸಾಧ್ಯವಿಲ್ಲ ಹಾಗಾಗಿ ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ಜಯಾ ಮಾಹಿತಿ ನೀಡಿದರು. ಆಕ್ಷೇಪಾರ್ಹ ವಿಷಯಗಳಿಗೆ ಕತ್ತರಿ ಪ್ರಯೋಗ ಮಾಡಿದರೆ ಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡಲಾಗುವುದು ಎಂದರು. ನನಗೆ ಕಮಲ್ ಮೇಲೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಮತ್ತು ಜಯಾ ಟಿವಿಗೆ ಸಿನಿಮಾದ ಕಾಫಿ ರೈಟ್ ನೀಡದಿರುವುದು ಈ ಅವಾಂತರಗಳಿಗೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದರಲ್ಲಿ ಹುರುಳಿಲ್ಲ ಎಂದು ಜಯಾ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT