ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವೇಶ್ವರಯ್ಯ ಸಂಸ್ಥೆ ನಿರ್ಮಾಣಕ್ಕೆ ಚಾಲನೆ

Last Updated 3 ಸೆಪ್ಟೆಂಬರ್ 2011, 10:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಗೆ ಕೀರ್ತಿ ತರಬಲ್ಲ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದವರಿಗೆ ಉಪಯುಕ್ತವಾಗಬಲ್ಲ ವಿಶ್ವೇಶ್ವರಯ್ಯ ಉನ್ನತ ತಾಂತ್ರಿಕ ಸಂಸ್ಥೆಯು (ವಿಐಎಟಿ) ಮುಂದಿನ ಎರಡು ವರ್ಷಗಳಲ್ಲಿ ಮುದ್ದೇನಹಳ್ಳಿಯಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್.ಆಚಾರ್ಯ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ವಿಐಎಟಿ ಸಂಸ್ಥೆ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಸ್ವಗ್ರಾಮದಲ್ಲಿ ಅವರದ್ದೇ ಹೆಸರಿನ ಅತ್ಯುತ್ತಮ ತಾಂತ್ರಿಕ ಸಂಸ್ಥೆಯೊಂದು ರೂಪುಗೊಳ್ಳಲಿದೆ~ ಎಂದರು.

ಒಟ್ಟಾರೆ 80 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದ್ದು, ಪ್ರಥಮ ಹಂತದ ರೂಪದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಆಡಳಿತಸೌಧ, ಸ್ನಾತಕೋತ್ತರ ಕೇಂದ್ರವನ್ನು ನಿರ್ಮಿಸಲಾಗುವುದು. ಎರಡನೇ ಹಂತದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿಗೃಹ, ಕ್ರೀಡಾ ಸಂಕೀರ್ಣ ಮತ್ತು ಸಂಶೋಧನಾ ಕೇಂದ್ರ ನಿರ್ಮಿಸ ಲಾಗುವುದು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಾದರಿಯುತ ಸಂಸ್ಥೆಯೊಂದನ್ನು ಸ್ಥಾಪಿಸಲಾಗುವುದು~ ಎಂದು ಅವರು ತಿಳಿಸಿದರು.

ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾಧಿ ಕಾರಿ ಡಾ. ಎನ್.ಮಂಜುಳಾ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಚ್.ಮಹೇಶಪ್ಪ, ಆದಿಚುಂಚನಗಿರಿ ಶಾಖಾಮಠದ ಮಂಗಳಾನಂದನಾಥ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT