ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆ

Last Updated 11 ಡಿಸೆಂಬರ್ 2013, 9:00 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ  ಪೂರ್ವಭಾವಿ ಸಭೆ ಈಚೆಗೆ ನಡೆಯಿತು.
ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾ ಸಂಸ್ಥೆಯ ಮಹಾಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನಲ್ಲಿ ಸಂಘದ ಸ್ಥಾಪನೆ ಬೆಳವಣಿಗೆಗಳ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಯಿತು.

ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಆರ್.ಎಂ. ಸ್ವಾಮಿ ಮಾತನಾಡಿ ತಾಲ್ಲೂಕಿನಲ್ಲಿ ಬಹಳ ದಿನಗಳ ಹಿಂದೆಯೇ ಸಂಘದ ಸ್ಥಾಪನೆಗೆ ಅಡಿಗಲ್ಲು ಹಾಕಬೇಕಾಗಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ.  ಗುಂಡ್ಲುಪೇಟೆಯಲ್ಲಿ ಸಂಘವು ಸ್ಥಾಪನೆಯಾಗುತ್ತಿರುವುದು ಖುಷಿ ತಂದಿದೆ ಎಂದರು.

ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸಪ್ಪ ಮಾತನಾಡಿ ತಾಲ್ಲೂಕಿನಲ್ಲಿ ವೀರಶೈವ ನೌಕರರು ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು. ಸಮಾಜದ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯವೆಂದು ಸ್ವೀಕರಿಸಿ ಕೆಲಸ ನಿರ್ವಹಿಸಿ ಎಂದರು. ತಾಲ್ಲೂಕು ವೀರಶೈವ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಈ ಸಂದರ್ಭದಲ್ಲಿ ನಡೆಯಿತು

ಕಾರ್ಯಕ್ರಮದಲ್ಲಿ ಜಿಲ್ಲಾ  ವೀರಶೈವ ನೌಕರರ ಸಂಘದ ಅಧ್ಯಕ್ಷ  ಶಂಕರಪ್ಪ, ಶಿಕ್ಷಕ ಶಾಂತಮಲ್ಲಪ್ಪ, ದೈಹಿಕ ಶಿಕ್ಷಕ ಕೆ.ಸಿ. ರಾಜಪ್ಪ, ವಯಸ್ಕರ  ಶಿಕ್ಷಣ ಸಂಯೋಜಕ  ಪುಟ್ಟಬುದ್ಧಿ  ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT