ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೂಲ್ಫ್ ವರದಿ ತಿರಸ್ಕರಿಸಿದ ಮಂಡಳಿ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ/ಐಎಎನ್‌ಎಸ್): ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ಆಡಳಿತ ಪುನರ‌್ರಚನೆ ಸಂಬಂಧ ಲಾರ್ಡ್ ವೂಲ್ಫ್ ನೀಡಿರುವ ವರದಿಯ ಪ್ರಮುಖ ಅಂಶಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿರಸ್ಕರಿಸಿದೆ.

ವೂಲ್ಫ್  ಸಾರಥ್ಯದ ಐಸಿಸಿ ಸ್ವತಂತ್ರ ಆಡಳಿತ ಪರಿಶೀಲನಾ ಸಮಿತಿ ಈ ಶಿಫಾರಸು ಮಾಡಿದೆ. ಇದರ ಪ್ರಕಾರ ಐಸಿಸಿ ಆಡಳಿತ ಹಾಗೂ ಕಾರ್ಯವೈಖರಿ ಸ್ವರೂಪದಲ್ಲಿ ಬದಲಾವಣೆಗೆಯಾಗಲಿದ್ದು, ಸಮಿತಿಯ ಅಧ್ಯಕ್ಷರ ಅಧಿಕಾರಕ್ಕೆ ಕೊಕ್ಕೆ ಬೀಳಲಿದೆ. ಜೊತೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ ಪಾರಮ್ಯಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ.

`ವೂಲ್ಫ್  ಮಾಡಿರುವ ಶಿಫಾರಸುಗಳ ಕುರಿತು ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಆದರೆ ವೂಲ್ಫ್ ಪ್ರಸ್ತಾಪಿಸಿರುವ ಕೆಲ ಅಂಶಗಳನ್ನು ಒಪ್ಪಲು ಸಾಧ್ಯವಿಲ್ಲ. ಇದಕ್ಕೆ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿಲ್ಲ. ಪ್ರಮುಖವಾಗಿ ಆಡಳಿತದಲ್ಲಿ ಮಾಡಿರುವ ಬದಲಾವಣೆಗಳನ್ನು ತಿರಸ್ಕರಿಸಲಾಗಿದೆ~ ಎಂದು ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ತಿಳಿಸಿದರು.

ವೂಲ್ಫ್ ವರದಿ ಪ್ರಕಾರ ಐಸಿಸಿ ಕಾರ್ಯನಿರ್ವಾಹಕ ಮಂಡಳಿಯಲ್ಲಿ ಪೂರ್ಣ ಬದಲಾವಣೆ ಆಗಲಿದ್ದು, ಹೆಚ್ಚಿನ ಸ್ವಾತಂತ್ರ್ಯ ನೀಡಲಾಗುತ್ತದೆ. ಜೊತೆಗೆ ಪಾರದರ್ಶಕ ಆಡಳಿತಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಹತ್ತು ದಿನಗಳ ಹಿಂದೆ ಅವರು ಈ ವರದಿ ನೀಡಿದ್ದರು.

ಆದರೆ ವರದಿಯಲ್ಲಿ ಯಾವ ಅಂಶಗಳನ್ನು ತಿರಸ್ಕರಿಸಲಾಗಿದೆ ಎಂಬುದರ ಬಗ್ಗೆ ಶ್ರೀನಿವಾಸನ್ ಹೆಚ್ಚಿನ ವಿವರಣೆ ನೀಡಲಿಲ್ಲ.

ತನಿಖೆ ಇಲ್ಲ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಕಂಡ ಭಾರತ ತಂಡದ ಆಟಗಾರರ ಪ್ರದರ್ಶನದ ಬಗ್ಗೆ ಬಿಸಿಸಿಐ ಯಾವುದೇ ತನಿಖೆ ನಡೆಸುವುದಿಲ್ಲ ಎಂದು ಶ್ರೀನಿವಾಸನ್ ಸ್ಪಷ್ಟಪಡಿಸಿದ್ದಾರೆ. ನಾಲ್ಕು ಪಂದ್ಯಗಳ ಈ ಸರಣಿಯಲ್ಲಿ ಭಾರತ 0-4ರಲ್ಲಿ ಸೋಲು ಕಂಡಿತ್ತು. ಹಾಗಾಗಿ ಎಂ.ಎಸ್.ದೋನಿ ಪಡೆ ಟೀಕಾ ಪ್ರಹಾರಕ್ಕೆ ಗುರಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT