ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿ ಪರಿಣತಿ ಜತೆಗೆ ಮಾನವೀಯತೆ ಅಗತ್ಯ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ದೇಶದ ವೈದ್ಯಕೀಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಕರ್ನಾಟಕ, ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕೂ ಸಾಕಷ್ಟು ಖ್ಯಾತಿ ಗಳಿಸಿದೆ~ ಎಂದು ತ್ರಿಪುರಾ ರಾಜ್ಯಪಾಲ ಡಾ.ಡಿ.ವೈ. ಪಾಟೀಲ್ ಪ್ರಶಂಸಿದರು.

ನಗರದ ಹೆಸರಘಟ್ಟ ರಸ್ತೆಯಲ್ಲಿ ನಿರ್ಮಿಸಲಾದ ಸಪ್ತಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. `ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಬೇರೆ ರಾಜ್ಯಗಳ ಜನ ಹಾತೊರೆಯುತ್ತಾರೆ. ಇಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಬೇರೆ ಇನ್ನೇನು ಸಾಕ್ಷಿ ಬೇಕು~ ಎಂದು ಅವರು ಕೇಳಿದರು.

`ವೃತ್ತಿಯಲ್ಲಿ ಪರಿಣತಿ ಸಾಧಿಸುವ ಜೊತೆಗೆ ಮಾನವೀಯ ಮೌಲ್ಯಗಳನ್ನೂ ರೂಢಿಸಿಕೊಂಡರೆ ಕಲಿತ ವಿದ್ಯೆಗೆ ಬೆಲೆ ಬರುತ್ತದೆ. ಪಾಲಕರು ಪರಿಶ್ರಮವಹಿಸಿ ಶಿಕ್ಷಣ ಕೊಡಿಸುವುದನ್ನು ಲಕ್ಷ್ಯದಲ್ಲಿ ಇಟ್ಟುಕೊಂಡು ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ವಹಿಸಬೇಕು~ ಎಂದು ಅವರು ಕಿವಿಮಾತು ಹೇಳಿದರು.

ಸಪ್ತಗಿರಿ ವೈದ್ಯಕೀಯ ಕಾಲೇಜಿನ ಅಧ್ಯಕ್ಷ ಜಿ. ದಯಾನಂದ, ಶ್ರೀನಿವಾಸ ಶಿಕ್ಷಣ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಡಿ. ಬಾಲಾಜಿ, ಕಾಲೇಜಿನ ಪ್ರಾಚಾರ್ಯ ಡಾ.ಡಿ.ಎಸ್. ವಾಸುದೇವ, ವೈದ್ಯಕೀಯ ಅಧೀಕ್ಷಕ ಡಾ.ಎಸ್.ಬಿ. ವಸಂತಕುಮಾರ್, ನಿರ್ದೇಶಕ ಡಾ.ಕೆ.ಎಂ. ಶ್ರೀನಿವಾಸಗೌಡ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT