ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿ ಶಿಕ್ಷಣ ಕಾಯ್ದೆಗೆ ಶ್ರೀರಾಮುಲು ವಿರೋಧ

Last Updated 18 ಡಿಸೆಂಬರ್ 2013, 20:00 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2006ರ ವೃತ್ತಿ ಶಿಕ್ಷಣ  ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಡ ವಿದ್ಯಾರ್ಥಿಗಳ ಪಾಲಿಗೆ ಖಳರಂತೆ ವರ್ತಿಸುತ್ತಿದೆ’ ಎಂದು ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಟೀಕಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ, ಬಡವರ ಪರ ಎಂದು ಹೇಳಿಕೊಂಡು ಅಧಿಕಾರದ ಗದ್ದುಗೆ ಹಿಡಿದ ಸಿದ್ದರಾಮಯ್ಯ ಅವರು, 2006ರ ಮೂಲಕ ಖಾಸಗಿ ಕಾಲೇಜುಗಳ ಲಾಬಿಗೆ ಮಣಿಯುತ್ತಿದ್ದಾರೆ’ ಎಂದರು.

‘ರಾಜ್ಯದಲ್ಲಿರುವ ಬಹುತೇಕ ಖಾಸಗಿ ಎಂಜಿನಿಯರಿಂಗ್ ಮತ್ತು  ವೈದ್ಯಕೀಯ ಕಾಲೇಜುಗಳು ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರ ಅಂಗೈಯಲ್ಲಿವೆ. ಅಂಥ ಖಾಸಗಿ ಕಾಲೇಜು ಗಳಿಗೆ ಅನುಕೂಲವಾಗುವಂತಹ ಸಿಇಟಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಸಿದ್ದರಾಮಯ್ಯನವರು ಅವರ ಪಕ್ಷದವರಿಗೇ ಅನುಕೂಲ ಮಾಡಿಕೊಡುತ್ತಿದ್ದಾರೆ’ ಎಂದು ಟೀಕಿಸಿದರು.

ಐದು ಕ್ಷೇತ್ರಗಳಿಂದ ಲೋಕಸಭೆಗೆ ಸ್ಪರ್ಧೆ: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ, ಕೊಪ್ಪಳ, ಹಾವೇರಿ, ಬಳ್ಳಾರಿ ಹಾಗೂ ರಾಯಚೂರು ಕ್ಷೇತ್ರಗಳಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಶ್ರೀರಾಮುಲು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT