ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿ ಶಿಕ್ಷಣ ಸಂಸ್ಥೆ ಕಾಯ್ದೆ ಖಂಡಿಸಿ ಪ್ರತಿಭಟನೆ

Last Updated 19 ಡಿಸೆಂಬರ್ 2013, 5:38 IST
ಅಕ್ಷರ ಗಾತ್ರ

ಮಂಡ್ಯ: ವೃತ್ತಿ ಶಿಕ್ಷಣದ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿಯನ್ನು ಸಾಮಾನ್ಯಪ್ರವೇಶ ಪರೀಕ್ಷೆಯ ಮೂಲಕವೇ ಮಾಡಬೇಕು ಎಂದು ಬುಧವಾರ ಭಾರತ ವಿದ್ಯಾರ್ಥಿ ಫೆಡರೇಷನ್‌್ ಸದಸ್ಯರು ನಗರದಲ್ಲಿ ರ್‌್್ಯಾಲಿ ನಡೆಸಿದರು.

ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರುಕಟ್ಟೆ ಸರಕಾಗಿಸಲು ಸರ್ಕಾರ ಮುಂದಾಗಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಉಪಾಧ್ಯಕ್ಷೆ ಜಯಲಕ್ಷ್ಮಿ ಎಲ್‌್್.ಎಸ್‌್್, ಜಿಲ್ಲಾ ಕಾರ್ಯದರ್ಶಿ ರಾಜೇಂದ್ರಸಿಂಗ್‌ ಬಾಬು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕು ಕಚೇರಿಗೆ ಮುತ್ತಿಗೆ
ಮದ್ದೂರು:  ರಾಜ್ಯ ಸರ್ಕಾರವು ಜಾರಿಗೊಳಿಸಲು ನಿರ್ಧರಿಸಿರುವ 2006ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯಲ್ಲಿನ ಲೋಪ ದೋಷಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಬುಧವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.  

ಪಟ್ಟಣದ ಎಚ್.ಕೆ. ವೀರಣ್ಣಗೌಡ ಕಾಲೇಜಿನಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ತಾಲ್ಲೂಕು ಕಚೇರಿ ಆವರಣಕ್ಕೆ ಬಂದು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

ನಗರ ಕಾರ್ಯದರ್ಶಿ ಲೋಕೇಶ್, ತಾಲ್ಲೂಕು ಪ್ರಮುಖ್ ಸಚ್ಚಿನ್, ವಿದ್ಯಾರ್ಥಿ ಮುಖಂಡರಾದ ನಿಶಾಂತ್, ಬಸವಯ್ಯ, ಗಗನ್, ಭರತ್, ಮೇಘನಾ, ಕಾವ್ಯಾ, ಪೂಜಾ, ಶ್ರುತಿ, ಐಶ್ವರ್ಯ, ತನುಜಾ, ಶಿಲ್ಪಾ, ಅಪೂರ್ವ, ರಾಜೇಶ್‌ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತಿಭಟನಾ ಮೆರವಣಿಗೆ
ನಾಗಮಂಗಲ: ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಎಬಿವಿಪಿ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಿಜಿಎಸ್ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಶ್ರೀರಂಗಪಟ್ಟಣ– -ಬೀದರ್ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಟಿ. ಮರಿಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಇದರಿಂದ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಯಿತು.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ತೇಜಸ್ವಿ ಮಾತನಾಡಿದರು. ನಂತರ ತಹಸೀಲ್ದಾರ್ ಸಿ.ಎಂ. ಶಿವಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿಯ ಜಿಲ್ಲಾ ಕಾರ್ಯದರ್ಶಿ ಚಿರಂಜೀವಿ, ನಗರ ಘಟಕದ ಕಾರ್ಯದರ್ಶಿ ವಿಶಾಕ್ ಯುವ ಮುಖಂಡರಾದ ವಿಶ್ವಾಸ್, ನಿಶಾಂತ್, ಫರ್ಹಾತ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬೃಹತ್‌ ಜಾಥಾ
ಮಳವಳ್ಳಿ: 2006ರ ಕಾಯ್ದೆ ಅನುಷ್ಠಾನ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಬೃಹತ್ ಜಾಥಾ ನಡೆಸಿ ಸರ್ಕಾರದ ವಿರುದ್ದ ಪ್ರತಿಭಟಿಸಿದರು.

ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ನೀತಿ ಬಗ್ಗೆ ಖಂಡಿಸಿ ತಹಶೀಲ್ದಾರ್ ಎಂ.ಅರ್. ರಾಜೇಶ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಸಿದ್ದರಾಜು, ಕಾರ್ಯದರ್ಶಿ ಕೆ.ಅರ್. ಪ್ರತಾಪ್, ಮುಖಂಡರಾದ ಕೆ.ಅರ್. ಪ್ರಸಾದ್, ಎಂ.ಎಸ್. ಹರೀಶ್, ದರ್ಶನ್, ಶ್ರೇಯಸ್, ಸಚಿನ್, ಮನೋಜ್, ರಾಕೇಶ್, ಮುಖಂಡ ಕೆ.ಸಿ. ನಾಗೇಗೌಡ ಭಾಗವಹಿಸಿದ್ದರು.

‘ಕಾಯ್ದೆ ಹಿಂಪಡೆಯಿರಿ’
ಪಾಂಡವಪುರ: ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ 2006ರ ಕಾಯ್ದೆಯನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂದೆ ಎಬಿವಿಪಿ ನೇತೃತ್ವದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರದ್ಧ ಘೋಷಣೆ ಕೂಗುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಧರಣಿ ನಡೆಸಿದರು.

ತಹಶೀಲ್ದಾರ್ ಡಿ.ಎಸ್. ಶಿವಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಎಬಿವಿಪಿ ತಾಲ್ಲೂಕು ಪ್ರಮುಖ್ ಎಂ. ಪಾಂಡಿದೊರೆ ಮತ್ತು ನಗರ ಕಾರ್ಯದರ್ಶಿ ಕೃಷ್ಣ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

ಮಾನವ ಸರಪಳಿ ರಚನೆ
ಶ್ರೀರಂಗಪಟ್ಟಣ: ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆ ಅನುಷ್ಠಾನ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಶ್ರೀರಂಗಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯ ರಸ್ತೆ ಮೂಲಕ ಮಿನಿ ವಿಧಾನಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಕೆಲಕಾಲ ಧರಣಿ ನಡೆಸಲಾಯಿತು.

ಚಂದ್ರಶೇಖರ್‌, ಅಭಿಜಿತ್‌, ರಂಜಿತಾ, ನಿವೇದಿತಾ ಇದ್ದರು. ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಅರಕೆರೆಯಲ್ಲಿ ಎಬಿವಿಪಿ ಕಾರ್ಯಕರ್ತರು ಕೀರ್ತನ್‌ಕುಮಾರ್‌, ಅಪೂರ್ವ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಾಡ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT