ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಆಯೋಗ: ಸಮಿತಿ ರಚನೆ

Last Updated 9 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಕುರಿತು ಅಧ್ಯಯನ ನಡೆಸಿ, ಸೂಕ್ತ ಸಲಹೆ ನೀಡುವ ಸಲುವಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೀರ್ ಹರಿಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿಯೊಂದನ್ನು ರಚಿಸಲು ಸರ್ಕಾರ ತೀರ್ಮಾನಿಸಿದೆ.

ಆರನೇ ವೇತನ ಆಯೋಗ ಜಾರಿಯಾದ ನಂತರ ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಿದೆ.
ಅದೇ ರೀತಿ ರಾಜ್ಯ ಸರ್ಕಾರಿ ನೌಕರರಿಗೂ ವೇತನ ಹೆಚ್ಚಳ ಮಾಡಬೇಕೆಂದು ನೌಕರರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಈ ಹಿನ್ನೆಲೆಯಲ್ಲಿ ಸಮಿತಿ ರಚಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಬಿಡಿಎ ಅಧ್ಯಕ್ಷರೂ ಆದ ಸುಬೀರ್ ಹರಿಸಿಂಗ್ ಸಮಿತಿಯ ಅಧ್ಯಕ್ಷರಾದರೆ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ವಿ.ನಾಗರಾಜನ್, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಠಿಯಾ ಅವರನ್ನು ಸದಸ್ಯರನ್ನಾಗಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಎಚ್.ಶಶಿಧರ್ ಅವರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ.

ಸಮಿತಿ ರಚನೆಗೆ ಸಂಬಂಧಿಸಿದ ಕಡತ ಸಿದ್ಧ ಆಗಿದ್ದು, ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಿ ಹಾಕುವುದು ಬಾಕಿ ಇದೆ. ಶುಕ್ರವಾರ ಈ ಕಡತಕ್ಕೆ ಸಹಿ ಹಾಕುವ ಸಾಧ್ಯತೆ ಇದ್ದು, ಈ ಸಮಿತಿ ಯಾರಿಗೆ ಎಷ್ಟು ವೇತನ ನಿಗದಿ ಮಾಡಬೇಕು ಎನ್ನುವುದರ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT