ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಕಡಿತ: ಶಿಕ್ಷಕರ ಪ್ರತಿಭಟನೆ

Last Updated 15 ಮಾರ್ಚ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಗ್ರಾಮೀಣ ಕೃಪಾಂಕ ಆಧಾರಿತ ನೇಮಕಾತಿ ಹೊಂದಿದ ಶಿಕ್ಷಕರು ಮತ್ತು ನೌಕರರ ಸೇವೆಗೆ ಅನುಗುಣವಾಗಿ ನೀಡಿರುವ ವೇತನ ಹೆಚ್ಚಳವನ್ನು ಕಡಿತಗೊಳಿಸುವ ಕ್ರಮವನ್ನು ಖಂಡಿಸಿ ಜಿಲ್ಲಾ ಗ್ರಾಮೀಣ ಕೃಪಾಂಕ ಶಿಕ್ಷಕರ ಮತ್ತು ನೌಕರರ ವೇದಿಕೆ ಸದಸ್ಯರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಗ್ರಾಮೀಣ ಕೃಪಾಂಕ ಸೌಲಭ್ಯದ ಅಡಿ ಸಾವಿರಾರು ಶಿಕ್ಷಕರು ನೇಮಕಗೊಂಡಿದ್ದಾರೆ. ಅವರೆಲ್ಲರಿಗೂ 1998ರಲ್ಲಿನ ನೇಮಕಾತಿ ದಿನಾಂಕದಿಂದ ವೇತನ ನಿಗದಿಗೊಳಿಸಿದೆ. ಆದರೆ, ಈಗ ಆ ವೇತನಕ್ಕೆ ತಾವು ಅರ್ಹರಲ್ಲ ಎಂದು , ನೀಡಲಾಗಿರುವ ಹೆಚ್ಚಳದ ವೇತನ ಕಡಿತಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆಯಲ್ಲಿ ವಿಶೇಷ ನೇಮಕಾತಿ ನಿಯಮಾವಳಿ 2003ಕ್ಕೆ ತಿದ್ದುಪಡಿ ಮಾಡುವ ಮೂಲಕ ಗ್ರಾಮೀಣ ಕೃಪಾಂಕ ಆಧಾರಿತ ನೌಕರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ಶಿವಕುಮಾರಸ್ವಾಮಿ, ರಾಘವೇಂದ್ರ, ಶಿವನಗೌಡ, ರಮೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT