ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಯ್ನ ಪಾರ್ನೆಲ್ ವಿಚಾರಣೆ

ಚುಟುಕು ಗುಟುಕು
Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ರೇವ್ ಪಾರ್ಟಿಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ವೇಯ್ನ ಪಾರ್ನೆಲ್ ಅವರನ್ನು ಪೊಲೀಸರು ಬುಧವಾರ ಮೂರು ಗಂಟೆಗೂ ಅಧಿಕ ಕಾಲ ವಿಚಾರಣೆಗೆ ಒಳಪಡಿಸಿದರು.

`ಮಧ್ಯಾಹ್ನ 12.30ರ ಸುಮಾರಿಗೆ ಪಾರ್ನೆಲ್ ವಿಚಾರಣೆ ಆರಂಭವಾಯಿತು. ಈ ವೇಳೆ ಪಾರ್ನೆಲ್ ಹೇಳಿದ್ದನ್ನು ದಾಖಲಿಸಿಕೊಳ್ಳಲಾಗಿದೆ' ಎಂದು ಸುಬರ್ಬನ್ ಜಾಹು ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

23 ವರ್ಷದ ಕ್ರಿಕೆಟಿಗ ಪಾರ್ನೆಲ್ ಭಾರತಕ್ಕೆ ಬಂದಾಗ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಜಾಮೀನು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾರತದ ಕ್ರಿಕೆಟಿಗ ರಾಹುಲ್ ಶರ್ಮಾ, ಟಿವಿ ನಿರೂಪಕಿ ಅಪೂರ್ವ ಅಗ್ರಿಹೋತ್ರಿ ಮತ್ತು ಶಿಲ್ಪಾ ವಿರುದ್ಧ ಮಾರ್ಚ್ 6ರಂದು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT