ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆ:ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪುರಸ್ಕಾರ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಸ್ಟಾಕ್‌ಹೋಮ್(ಐಎಎನ್‌ಎಸ್):  ವೈದ್ಯಕೀಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಇಬ್ಬರು ವಿಜ್ಞಾನಿಗಳನ್ನು 2012ರ  ನೊಬೆಲ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.ಸೋಮವಾರ ಇಲ್ಲಿನ ಸ್ವೀಡಿಷ್ ಕರೊಲಿನ್ಸ್ಕಾ ಸಂಸ್ಥೆಯಲ್ಲಿ ನಡೆದ `ನೊಬೆಲ್ ಪುರಸ್ಕಾರ ಸಮಿತಿ~ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಂಗ್ಲೆಂಡ್‌ನ ಜಾನ್ ಬಿ. ಗುರ್ಡೊನ್ ಮತ್ತು ಜಪಾನ್‌ನ ಶಿನ್ಯಾ ಯಮನಕ ಅವರು ಈ ಬಾರಿಯ ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಯಮನಕ ಪ್ರಸ್ತುತ ಅಮೆರಿಕದ ಸ್ಯಾನ್‌ಪ್ರಾನ್ಸಿಸ್ಕೋದ ಗ್ಲಾಡ್‌ಸ್ಟೋನ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದಾರೆ.
 
`ಈ ಇಬ್ಬರು ವಿಜ್ಞಾನಿಗಳು ಸಂಶೋಧನೆ, ಜೀವಿ ಮತ್ತು ಜೀವಕೋಶಗಳು ಹೇಗೆ ಅಭಿವೃದ್ಧಿ ಹೊಂದುತ್ತವೆ ಎಂಬುದರ ಕುರಿತು ವಿಭಿನ್ನವಾಗಿ ಚಿಂತಿಸುವಂತೆ ಮಾಡುತ್ತದೆ~ ಎಂದು ಸಮಿತಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿರುವ ರಸಾಯನಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಆರ್ಥಿಕ ಕ್ಷೇತ್ರದ ಸಾಧಕರ ಹೆಸರುಗಳು ಇದೇ ವಾರದಲ್ಲಿ ಪ್ರಕಟಗೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT