ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ನಿರ್ಲಕ್ಷ್ಯ: ತನಿಖೆಗೆ ಆದೇಶ

Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಫೋರ್ಟಿಸ್‌ ಆಸ್ಪತ್ರೆಯಲ್ಲಿ 2010ರ ಮೇ 6ರಂದು, ವೈದ್ಯರ ನಿರ್ಲಕ್ಷ್ಯದ ಕಾರಣ ರೋಗಿ­ಯೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪ ಕುರಿತು ಲೋಕಾ­ಯುಕ್ತ  ವರದಿ ಆಧರಿಸಿ, ಹೊಸದಾಗಿ ತನಿಖೆ ನಡೆಸ­ಬೇಕು ಎಂದು ಹೈಕೋರ್ಟ್‌ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ.

ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮೇಜರ್‌ (ನಿವೃತ್ತ) ಪಂಕಜ್‌ ರೈ ಅವರ ಪತ್ನಿ ಸೀಮಾ ರೈ ಎಂಬುವರು ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಕಾರಣ ಮೃತಪಟ್ಟರು ಎಂದು ಆರೋಪಿಸಲಾಗಿದೆ.

ಆಸ್ಪತ್ರೆಯು ಜಠರ ಮತ್ತು ಮೇದೋಜ್ಜೀರಕಕ್ಕೆ ಸಂಬಂಧಿ­ಸಿದ ಕೆಲವು ನಿರ್ದಿಷ್ಟ ಶಸ್ತ್ರ­ಚಿಕಿತ್ಸೆಗಳನ್ನು ನಡೆಸುವಂತಿಲ್ಲ ಎಂದು ಹೈಕೋರ್ಟ್‌ನ ಏಕ­ಸದಸ್ಯ ಪೀಠ ನೀಡಿರುವ ಆದೇಶ ಪ್ರಶ್ನಿಸಿ, ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆ ಸಲ್ಲಿಸಿರುವ ಮೇಲ್ಮನವಿ ಇದಾಗಿದೆ. ನ್ಯಾಯಮೂರ್ತಿ ಎನ್‌. ಕುಮಾರ್‌ ನೇತೃತ್ವದ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT