ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರಿಗೆ ಶಂಕರ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ

Last Updated 1 ಜನವರಿ 2012, 19:30 IST
ಅಕ್ಷರ ಗಾತ್ರ

ಗುಲ್ಬರ್ಗ: ಡಾ. ಪಿ.ಎಸ್.ಶಂಕರ ಪ್ರತಿಷ್ಠಾನದ ವಾರ್ಷಿಕೋತ್ಸವ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಿದ ವೈದ್ಯರಿಗೆ ಪ್ರಶಸ್ತಿ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳನ್ನು ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಭಾನುವಾರ ಸಂಜೆ ಪ್ರದಾನ ಮಾಡಲಾಯಿತು.

 2011ನೇ ಸಾಲಿನ `ಡಾ. ಪಿ.ಎಸ್.ಶಂಕರ ವೈದ್ಯಶ್ರೀ~ ಪ್ರಶಸ್ತಿಯನ್ನು ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞ ಹಾಗೂ ಬೆಂಗಳೂರಿನ ಜಯದೇವ ಹೃದ್ರೋಗ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ. 10,000 ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

`ನೋವು ನೀಗುವ ಕಾಯಕದಲ್ಲಿ ಕಂಡ ಬದುಕು, ಬೆಳಕು~ ಕೃತಿ ರಚಿಸಿದ ಖ್ಯಾತ ಹೋಮಿಯೋಪಥಿ ತಜ್ಞ ಡಾ. ಬಿ.ಟಿ. ರುದ್ರೇಶ ಅವರಿಗೆ 2010ನೇ ಸಾಲಿನ `ಡಾ. ಪಿ.ಎಸ್.ಶಂಕರ ಶ್ರೇಷ್ಠ ವೈದ್ಯ ಸಾಹಿತ್ಯ~ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಪ್ರಶಸ್ತಿಯು ರೂ. 5,000 ನಗದು ಹಾಗೂ  ಪ್ರಶಸ್ತಿ ಫಲಕ ಒಳಗೊಂಡಿದೆ.

ಬೆಂಗಳೂರಿನ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಸಯ್ಯದ್ ನಜಾಫರ್ ಫಾತಿಮಾ, ಆಕಾಶ ಪ್ರಸನ್ನಕುಮಾರ ಮತ್ತು ಮಂಡ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಿದ್ಧಲಿಂಗೇಶ್ ಆರ್.ಅವರಿಗೆ 2011-16ನೇ ಸಾಲಿನ ವಿದ್ಯಾರ್ಥಿ ವೇತನ ಪ್ರದಾನ ಮಾಡಲಾಯಿತು.

ರೂ. 15,000 ಮೌಲ್ಯದ ಕನ್ನಡ ವೈದ್ಯ ಪುಸ್ತಕಗಳನ್ನು `ಡಾ. ಪಿ.ಎಸ್.ಶಂಕರ ಪ್ರತಿಷ್ಠಾನ ಪೋಷಿತ ಗ್ರಂಥ ಭಂಡಾರ~ ಯೋಜನೆಯಡಿ ಶಹಾಪುರ ತಾಲ್ಲೂಕಿನ ಕೊಂಕಲ್ ಗ್ರಾಮ ಪಂಚಾಯಿತಿ ಗ್ರಂಥ ಭಂಡಾರಕ್ಕೆ ನೀಡಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT