ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರಿಲ್ಲದ ಆಸ್ಪತ್ರೆ:ಗ್ರಾಮಸ್ಥರ ಪ್ರತಿಭಟನೆ

Last Updated 21 ಫೆಬ್ರುವರಿ 2011, 17:35 IST
ಅಕ್ಷರ ಗಾತ್ರ

ಬೀಳಗಿ: ತಾಲ್ಲೂಕಿನ ಗಿರಿಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದೂವರೆ ತಿಂಗಳಿನಿಂದ ವೈದ್ಯರು ಇಲ್ಲದೇ ಇರುವುದನ್ನು ಪ್ರತಿಭಟಿಸಿ, ಗ್ರಾಮಸ್ಥರು ಹಾಗೂ ಲಿಂಗಾರೂಢ ಯುವಕ ಮಂಡಳದ ಸದಸ್ಯರು ಸೋಮವಾರ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಇಲ್ಲಿರುವ ವೈದ್ಯರು ಒಂದೂವರೆ ತಿಂಗಳಿನಿಂದ ರಜೆಯ ಮೇಲಿದ್ದರೂ ಮೇಲಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಗಿರಿಸಾಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ವೈದ್ಯಕೀಯ ಉಪಚಾರಕ್ಕಾಗಿ ತುಂಬಾ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ಬಿ. ಚೌಧರಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಜಯಶ್ರೆ ಎಮ್ಮಿ, ತಹಸೀಲ್ದಾರ್ ಎಲ್.ಬಿ. ಕುಲಕರ್ಣಿ ಶೀಘ್ರವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT