ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಮನಸ್ಸು ಶಮನಕ್ಕೆ ಸಭೆ: ಶೆಟ್ಟರ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕಾರವಾರ: ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವಿರುವ ವೈಮನಸ್ಸು ಶಮನ ಮಾಡಲು ಇದೇ 14ರಂದು ಪಿಡಿಓ ಮತ್ತು ಗ್ರಾ.ಪಂ. ಅಧ್ಯಕ್ಷರ ಸೌಹಾರ್ದ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಸಚಿವ ಜಗದೀಶ ಶೆಟ್ಟರ ಹೇಳಿದರು.

ನಗರದ ಎಂ.ಜಿ.ರಸ್ತೆಯಲ್ಲಿ ನಿರ್ಮಾಣವಾಗಿರುವ ಜಿಲ್ಲಾ ಪಂಚಾಯಿತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು ಪ್ರತಿ ತಾಲ್ಲೂಕಿನಿಂದ ನಾಲ್ಕು ಪಿಡಿಒಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದರು.

ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ನಡುವಿನ ವೈಮನಸ್ಸಿನಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಪರಸ್ಪರರಲ್ಲಿ ಯಾವರೀತಿಯ ಹೊಂದಾಣಿಕೆ ಇರಬೇಕು, ಸಮಾಜಕ್ಕೆ ಅವರ ಕೊಡುಗೆ ಏನು ಎನ್ನುವುದನ್ನು ಮನದಟ್ಟು ಮಾಡಿಕೊಟ್ಟು ಒಂದಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ಮನವರಿಕೆ ಮಾಡಲಾಗುವುದು ಎಂದರು.

ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸಿ ಅಭಿವೃದ್ಧಿಗೆ ಹೊಸರೂಪ ನೀಡಲು ವೃಂದ ಮತ್ತು ನೇಮಕಾತಿ ಕಾನೂನಿಗೆ ತಿದ್ದುಪಡಿ ತಂದು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. 1400 ಪಿಡಿಒ ಮತ್ತು 600ರಿಂದ 700 ಸಹಾಯಕ ಎಂಜಿನಿಯರ್‌ಗಳನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT