ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಕ್ತಿಕ ಪ್ರಕರಣಕ್ಕೆ ಕೆಎಂಎಫ್ ಹಣ ಬಳಕೆಯಾಗಿಲ್ಲ- ಸ್ಪಷ್ಟನೆ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ವೈಯಕ್ತಿಕವಾಗಿ ನನ್ನನ್ನು ಪ್ರತಿವಾದಿಯನ್ನಾಗಿ ಮಾಡಿದ ಪ್ರಕರಣಗಳಲ್ಲಿ ನ್ಯಾಯಾಲಯದ ವೆಚ್ಚಕ್ಕೆ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಹಣವನ್ನು ಭರಿಸಿಲ್ಲ~ ಎಂದು ಕೆಎಂಎಫ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎ.ಎಸ್.ಪ್ರೇಮನಾಥ್ ಸ್ಪಷ್ಟಪಡಿಸಿದ್ದಾರೆ.

`ಕೆಎಂಎಫ್ ವಿರುದ್ಧ ಪ್ರಕರಣ ದಾಖಲಿಸಿ, ಅದರಲ್ಲಿ ನನ್ನನ್ನೂ ಪ್ರತಿವಾದಿಯನ್ನಾಗಿ ಮಾಡಿದ ಸಂದರ್ಭದಲ್ಲಿ ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ಕೋರ್ಟ್ ವೆಚ್ಚ ಭರಿಸಲಾಗಿದೆ ~ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

`ಕೆಎಂಎಫ್ ಆಸ್ತಿ ರಕ್ಷಣೆಗಾಗಿ ಆಡಳಿತ ಮಂಡಳಿ ತೀರ್ಮಾನದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರನ್ನು ನೇಮಕ ಮಾಡಿ, ಅವರಿಗೆ ಶುಲ್ಕ ಪಾವತಿಸಲಾಗಿದೆ. ಇದು ವೈಯಕ್ತಿಕವಾಗಿ ನನಗೆ ಸಂಬಂಧಿಸಿದ್ದಲ್ಲ. ನ್ಯಾಯಾಲಯ ವೆಚ್ಚಕ್ಕಾಗಿ ನಾನು ಕೆಎಂಎಫ್‌ನ ಬಳಕೆ ಮಾಡಿಕೊಂಡಿದ್ದೇನೆ ಎಂದು ನಿರ್ದೇಶಕ ಎಚ್.ಡಿ.ರೇವಣ್ಣ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು~ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT