ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಕ್ತಿಕ ವರ್ಚಸ್ಸಿನಿಂದ ಬಿಜೆಪಿಗೆ ಗೆಲುವು

Last Updated 1 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಿಜಯಪುರ: `ಕೊಪ್ಪಳ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿಸಂಗಣ್ಣ ಅವರ ವೈಯಕ್ತಿಕ ವರ್ಚಸ್ಸು ಗೆಲುವಿಗೆ ಕಾರಣವಾಯಿತು~ ಎಂದು ಕಾರ್ಮಿಕ ಖಾತೆ ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ಇಲ್ಲಿನ ಇತಿಹಾಸ ಪ್ರಸಿದ್ಧ ಸೌಮ್ಯಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಬ್ರಾಹ್ಮಣಸೇವಾ ಮಂಡಲಿಯ ವತಿಯಿದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

`ಕೊಪ್ಪಳ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆಗೆ ಕರಡಿ ಸಂಗಣ್ಣ ಆದ್ಯತೆ ನೀಡಿದ್ದಾರೆ. ಅದರ ಫಲವೇ ಚುನಾವಣೆಯಲ್ಲಿ ಜಯಕ್ಕೆ ಕಾರಣ~ ಎಂದು ಅವರು ಸಮರ್ಥಿಸಿಕೊಂಡರು.

ಬೆಂಗಳೂರು ಗ್ರಾಮಾಮತರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮತ್ತು ಕುಮಾರ ಧಾರಾ ನದಿ ಪಾತ್ರದ ನೀರು ಹರಿಸುವ ಸುಮಾರು 35556 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ಚಾಲನೆ ನೀಡಲಾಗಿದೆ. ಪ್ರಥಮ ಹಂತದಲ್ಲಿ 2256 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಕೇಂದ್ರಸರ್ಕಾರದಿಂದಲೂ ಅನುದಾನವನ್ನು ನಿರೀಕ್ಷಿಸಲಾಗಿದೆ~ ಎಂದು ಅವರು ವಿವರಿಸಿದರು.
ಯೋಜನೆಯ ನಂತರ ಮೇಲಿನ ಎಲ್ಲಾ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸಲು ಅನುಕೂಲವಾಗುವಂತೆ ನೀಲನಕಾಶೆ ಸಿದ್ಧವಾಗಿದೆ ಎಂದು ಅವರು ವಿವರಿಸಿದರು.

ಹೊಸಕೋಟೆ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಏತನೀರಾವರಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ವಿಜಯಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಆನೇಕಲ್ ತಾಲ್ಲೂಕಿಗೆ ಕಾವೇರಿ ನೀರು ಹರಿಸುವ ಯೋಜನೆಯ ಬಗ್ಗೆಯೂ ಪ್ರಸ್ತಾಪವಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ವಕ್ಕಲಿಗರ ಸಂಘದ ಬಿ.ವಿ.ಸತೀಶ್‌ಗೌಡ, ಶೇಖರ್‌ಗೌಡ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎನ್.ರಾಜಗೋಪಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನಾಗೇಶ್, ಪುರಸಭಾಧ್ಯಕ್ಷೆ ಮಂಜುಳಾ ಎ.ನಾರಾಯಣಸ್ವಾಮಿ, ಮುಖ್ಯಾಧಿಕಾರಿ ಎಂ.ಆರ್.ಮಂಜುನಾಥ್, ತ್ಲ್ಲಾಲೂಕು ಬಿಜೆಪಿ ಅಧ್ಯಕ್ಷ ಹನುಮಂತರಾಯಪ್ಪ, ಮಾಚಪ್ಪ, ಅಪ್ಪಯ್ಯಣ್ಣ, ತತ್ತಮಂಗಲ ನಾರಾಯಣಸ್ವಾಮಿ, ಸಂಪತ್, ಮಧು, ಟೌನ್ ಬಿಜೆಪಿ ಪದಾಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಸಚಿವ ಬಿ.ಎನ್.ಬಚ್ಚೇಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬ್ರಾಹ್ಮಣ ಸೇವಾಮಮಡಲಿಯ ವತಿಯಿಂದ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT