ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೋಟಿಗಾಗಿ ನೋಟು: ನ್ಯಾಯಾಧೀಶರ ಅಸಮಾಧಾನ

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವೋಟಿಗಾಗಿ ನೋಟು ಪ್ರಕರಣದ ಆರೋಪಿಯಾದ ಬಿಜೆಪಿಯ ಸಂಸದ ಅಶೋಕ್ ಅರ್ಗಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಲೋಕಸಭೆಯಿಂದ ಇನ್ನೂ ಸರಿಯಾದ ಅನುಮತಿ ದೊರೆಯದೇ ಇರುವುದಕ್ಕೆ ದೆಹಲಿ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಸಂಗೀತಾ ಧಿಂಗ್ರಾ ಸೆಹಗಲ್ ಅವರು, `ಅಶೋಕ್ ಅರ್ಗಲ್ ಅವರ ವಿರುದ್ಧದ ಕಾನೂನು ಕ್ರಮಕ್ಕೆ ಅನುಮತಿ ನೀಡುವಲ್ಲಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಕೇವಲ ಒಂದು ಪತ್ರವನ್ನು ನೀಡಿದ್ದಾರೆ. ಆದರೆ ಇದು ನ್ಯಾಯಾಲಯಕ್ಕೆ ತೃಪ್ತಿಕರವಾಗಿ ಕಾಣುತ್ತಿಲ್ಲ~ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಆರೋಪಿಗಳ ವಿರುದ್ಧದ ಎರಡನೇ ದೋಷಾರೋಪ ಪಟ್ಟಿಯನ್ನು ಪರಿಗಣಿಸುವ ಕುರಿತು ಅಕ್ಟೋಬರ್ 14ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ: ಇದೇ ಸಂದರ್ಭದಲ್ಲಿ ಇದೇ ಪ್ರಕರಣದ ಮತ್ತಿತರ ಆರೋಪಿಗಳಾದ ಸುಧೀಂದ್ರ ಕುಲಕರ್ಣಿ, ಬಿಜೆಪಿ ಸಂಸದ ಫಗ್ಗನ್ ಸಿಂಗ್ ಕುಲಸ್ತೆ, ಮಹಾವೀರ್ ಸಿಂಗ್ ಭಗೋರಾ ಅವರ ಜಾಮೀನು ಅರ್ಜಿ ವಿಚಾರಣೆಯೂ ನಡೆಯಿತು. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 13ಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT