ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರದ್‌ ಪವಾರ್‌ ನಿರಾಳ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮುಂಬೈ ಕ್ರಿಕೆಟ್‌ ಸಂಸ್ಥೆ (ಎಂಸಿಎ) ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸದಂತೆ ಸ್ಥಳೀಯ ನ್ಯಾಯಾಲಯವು ಶರದ್‌ ಪವಾರ್‌ಗೆ ನೀಡಿದ್ದ ನಿರ್ದೇಶನಕ್ಕೆ ಬಾಂಬೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.

ಪವಾರ್‌ ಎಂಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಗೋಪಿನಾಥ್‌ ಮುಂಡೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯ ನ. 26 ರಂದು  ನೀಡಿದ ತೀರ್ಪಿನಲ್ಲಿ ಪವಾರ್‌ಗೆ ಎಂಸಿಎ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ಸೂಚಿಸಿತ್ತು.
ಪವಾರ್‌ ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದರು.

ಸೋಮವಾರ ತೀರ್ಪು ನೀಡಿದ ನ್ಯಾಯಮೂರ್ತಿ ಮೊಹ್ತಾ, ಸ್ಥಳೀಯ ನ್ಯಾಯಾಲಯ ನೀಡಿದ ತೀರ್ಪಿಗೆ ಡಿಸೆಂಬರ್‌ 17ರ ವರೆಗೆ ತಡೆಯಾಜ್ಞೆ ವಿಧಿಸಿದ್ದಾರೆ. ಮಾತ್ರವಲ್ಲ, ಪವಾರ್‌ ಮೇಲ್ಮನವಿಯ ವಿಚಾರಣೆಯನ್ನು ಡಿ. 13 ರಂದು ನಡೆಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT