ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರ್ಮಾ ಹೆಸರು ಪರಿಗಣಿಸಲು ಸಿಎಟಿ ಆದೇಶ

Last Updated 2 ಜನವರಿ 2014, 20:17 IST
ಅಕ್ಷರ ಗಾತ್ರ

ಬೆಂಗಳೂರು: ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿ­ಗಳು ನೀಡುವ ಪದಕಕ್ಕೆ ಐಪಿಎಸ್‌ ಅಧಿಕಾರಿ, ಬೆಂಗಳೂರು ಮಹಾ­­ನಗರ ಕಾರ್ಯಪಡೆ (ಬಿಎಂ­ಟಿಎಫ್‌) ಮುಖ್ಯಸ್ಥ ಆರ್.ಪಿ. ಶರ್ಮಾ ಅವರ ಹೆಸರನ್ನು ಇದೇ 26ರೊಳಗೆ ಪರಿಗಣಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಕೆಂದ್ರ ಆಡಳಿತ ನ್ಯಾಯ­ಮಂಡಳಿ ಗುರುವಾರ ಆದೇಶಿಸಿದೆ.

ರಾಜ್ಯ ಸರ್ಕಾರದ ಉನ್ನತಾಧಿಕಾರ ಸಮಿತಿ ಈ ಪದಕಕ್ಕೆ ಶರ್ಮಾ ಹೆಸರನ್ನು ಶಿಫಾರಸು ಮಾಡಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕೇಂದ್ರ ಗೃಹ ಸಚಿವಾಲಯ, ಶರ್ಮಾ ಅವರ ವಿರುದ್ಧ ಯಾವುದೇ ಪ್ರಕರಣ ವಿಚಾರಣೆಯ ಹಂತದಲ್ಲಿದೆಯೇ ಎಂದು ಪ್ರಶ್ನಿಸಿತ್ತು.

ಈ ಪತ್ರವನ್ನು ಪ್ರಶ್ನಿಸಿ ಶರ್ಮಾ ಅವರು ಸಿಎಟಿ ಮೆಟ್ಟಿಲೇರಿದ್ದರು. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ವಿಚಾರಣೆಯ ಹಂತದಲ್ಲಿಲ್ಲ ಎಂಬುದನ್ನು ಪರಿಗಣಿಸಿದ ಸಿಎಟಿ, ಈ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT