ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಚಿಕಿತ್ಸೆ ತರಬೇತಿ ಕೇಂದ್ರಕ್ಕೆ ಚಾಲನೆ

Last Updated 5 ಜುಲೈ 2013, 6:18 IST
ಅಕ್ಷರ ಗಾತ್ರ

ಧಾರವಾಡ: `ಗ್ರಾಮೀಣ ಭಾಗದ ಮಹಿಳೆ ಹಾಗೂ ಪುರುಷರನ್ನು ಜಾಗೃತಗೊಳಿಸಿ ಉದರದರ್ಶಕ ಶಸ್ತ್ರಚಿಕಿತ್ಸೆ ಮೂಲಕ ಜನಸಂಖ್ಯೆ ನಿಯಂತ್ರಣಕ್ಕೆ ಹಗಲಿರುಳು ದುಡಿಯುವ ಸಂಸ್ಥೆಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು' ಎಂದು ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದರು.

ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾದ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸೆ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. `ಮಹಿಳೆಯರ ಆರೋಗ್ಯಕ್ಕಾಗಿ ಶ್ರಮಿಸುವ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ಜಿಲ್ಲಾ ಶಾಖೆಗೆ ಅಗತ್ಯ ಅನುದಾನ ತರಲು ಸಂಪೂರ್ಣ ಸಹಕಾರ ನೀಡಲಾಗುವುದು' ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಮೇಘಣ್ಣವರ ಮಾತನಾಡಿ, `ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ನಿರೀಕ್ಷಿತ ಪ್ರಮಾಣದಲ್ಲಿ ಗುರಿ ಸಾಧಿಸಲು ವಿಫಲವಾಗಿದೆ. ಆದರೆ, ಪ್ರಗತಿ ಸರ್ಕಾರೇತರ ಸಂಸ್ಥೆಯಾದ ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ದೇಶದ ಜನಸಂಖ್ಯೆ ನಿಯಂತ್ರಣದಲ್ಲಿ ಬಹುದೊಡ್ಡ ಪಾತ್ರ ವಹಿಸಿರುವುದು ಹೆಮ್ಮೆಯ ಸಂಗತಿ' ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎನ್.ಎಂ.ಅಂಗಡಿ, ಎಸ್‌ಡಿಎಂ ಆಸ್ಪತ್ರೆಯ ಡಾ.ಓ.ಎ.ಮಹಿಪಾಲ್, ಡಾ.ಮೋನಿಕ್ ಕಾಮತ್, ಪ್ರಸೂತಿ ತಜ್ಞೆ ಡಾ.ರತ್ನಮಾಲಾ ಕುಲಕರ್ಣಿ, ಫ್ಯಾಮಿಲಿ ಪ್ಲ್ಯಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ಡಾ.ರಾಜನ್ ದೇಶಪಾಂಡೆ, ಜಿಲ್ಲಾ ಶಾಖಾ ವ್ಯವಸ್ಥಾಪಕಿ ಸುಜಾತಾ ಅನಿಶೆಟ್ಟರ್, ಡಾ.ಮದನಮೋಹನ ತಾವರಗೇರಿ ಇದ್ದರು. ವಿ.ವಿ.ಕಟ್ಟಿ ಸ್ವಾಗತಿಸಿದರು. ನಿಂಗಪ್ಪ ಮಡಿವಾಳರ ನಿರೂಪಿಸಿದರು. ಪಿ.ಪಿ.ಗಾಯಕವಾಡ ವಂದಿಸಿದರು.

ರಾಷ್ಟ್ರೀಯ ಸಮ್ಮೇಳನ ಇಂದಿನಿಂದ
ಧಾರವಾಡ:
ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜು  ವತಿಯಿಂದ ಇದೇ 5 ಹಾಗೂ 6 ರಂದು ವಿಜ್ಞಾನ ಮತ್ತು ತಾಂತ್ರಿಕ ರಂಗದಲ್ಲಿ ಮಹಿಳೆಯರು ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. 

ಮೌಲಾನಾ ಆಜಾದ್ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಭೋಪಾಲ್‌ನ ಎನರ್ಜಿ ವಿಭಾಗದ ಮುಖ್ಯಸ್ಥ ಡಾ.ಸರೋಜ ರಂಗನೇಕರ್ ಉದ್ಘಾಟಿಸುವರು. ದೇಶದ ವಿವಿಧ ಭಾಗಗಳಿಂದ ನೂರಕ್ಕೂ ಮಂದಿ ತಮ್ಮ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಈ ಎಲ್ಲ ಪ್ರಬಂಧಗಳು International Journal of Engineering and Technology ಯಲ್ಲಿ ಪ್ರಕಟವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT