ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಶಾಲಾ ಕಟ್ಟಡ ನಿರ್ಮಿಸಿ'

Last Updated 3 ಸೆಪ್ಟೆಂಬರ್ 2013, 6:57 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಆದರ್ಶ್ ವಿದ್ಯಾಸಂಸ್ಥೆಯು ತಾಲ್ಲೂಕಿನಲ್ಲಿ ಹೆಸರು ಮಾಡಿದ್ದರೂ ಸ್ವಂತ ಕಟ್ಟಡವಿಲ್ಲದೆ ಇರುವುದು ಬೇಸರದ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ವಿಷಾದಿಸಿದರು.

ಪಟ್ಟಣದ ಗುರುಭವನದಲ್ಲಿ ವಿ.ಎಸ್. ಚಾರಿಟೇಬಲ್ ಟ್ರಸ್ಟ್ ಹಾಗೂ ಆದರ್ಶ್ ವಿದ್ಯಾಲಯ ವತಿಯಿಂದ ಈಚೆಗೆ ನಡೆದ ಪೂರ್ವ ಪ್ರಾಥಮಿಕ ಮಕ್ಕಳ ಪದವಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆದರ್ಶ್ ವಿದ್ಯಾಲಯದ ಮಾಲೀಕರು ಸ್ವಂತ ಕಟ್ಟಡ ನಿರ್ಮಾಣಕ್ಕೆ ಆಸಕ್ತಿ ವಹಿಸದೇ ಇರುವುದು ವಿಷಾದನೀಯ ಎಂದು ಅವರು ಶೀಘ್ರ ಸುಸಜ್ಜಿತ ಕಟ್ಟಡ ನಿರ್ಮಿಸುವಂತೆ ಸೂಚಿಸಿದರು.

ಆದರ್ಶ್ ವಿದ್ಯಾಲಯದ ಅಧ್ಯಕ್ಷ ಎಂ.ಎಸ್. ದಯಾಶಂಕರ್ ಮಾತನಾಡಿ, ಪಟ್ಟಣದಲ್ಲಿ ನಿವೇಶನಗಳ ಬೆಲೆ ದುಬಾರಿಯಾಗಿದ್ದು, ನಿವೇಶನ ಖರೀದಿಸಿ ಕಟ್ಟಡ ನಿರ್ಮಾಣಕ್ಕೆ 2 ವರ್ಷಗಳ ಹಿಂದೆಯೇ ಪ್ರಯತ್ನಿಸಲಾಯಿತು. ಆದರೆ, ಕಟ್ಟಡ ನಿರ್ಮಾಣದ ವೇಳೆಗೆ ಸಾಮಗ್ರಿಗಳ ಬೆಲೆ ದುಬಾರಿಯಾದ ಕಾರಣದಿಂದ ಕಟ್ಟಡ ನಿರ್ಮಾಣ ವಿಳಂಬವಾಗಿದ್ದು, ಶೀಘ್ರವಾಗಿ ಕಟ್ಟಡ ನಿರ್ಮಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಪುಟಾಣಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು.
ಟ್ರಸ್ಟಿ ಜಿ.ಎಸ್. ಮಧುಸೂಧನ್, ಮುಕುಂದನ್, ಶಿಕ್ಷಕರು ಪೋಷಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT