ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ- ಕಾಲೇಜುಗಳಲ್ಲಿ ಪ್ರಚಾರಕ್ಕೆ ನಿರ್ಬಂಧ

Last Updated 18 ಜನವರಿ 2012, 7:50 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂಬರುವ ವಿಧಾನ ಪರಿಷತ್ ಸದಸ್ಯರ ಚುನಾವಣೆ ಸಂದರ್ಭದಲ್ಲಿ ಶಾಲಾ-ಕಾಲೇಜುಗಳ ಅವಧಿಯಲ್ಲಿ ಪ್ರಚಾರಕ್ಕೆ ಅವಕಾಶ ನೀಡಿದರೆ ಮುಖ್ಯ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೆಶಕ ಜಿ.ವಿ. ದಿವಾಕರ ತಿಳಿಸಿದರು.

ನಗರದ ಗುರುಭವನದಲ್ಲಿ ಮಂಗಳವಾರ ನಡೆದ ಶಿಕ್ಷಕರ ಅದಾಲತ್ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳು ತಾವು ಶಿಕ್ಷಕ ಮತದಾರರಿಂದ ಮತ ಯಾಚಿಸುವಾಗ ತರಗತಿಗಳು ನಡೆಯುತ್ತಿರಬಾರದು. ತಮ್ಮ ಮತಯಾಚನೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗಬಾರದು. ಈ ರೀತಿಯ ತೊಂದರೆಯಾದರೆ ಆ ಶಾಲೆಯ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ 2012 ಅನ್ನು `ಗುಣಾತ್ಮಾಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ~ ಎನ್ನುವ ಘೋಷಣೆ ಅಡಿಯಲ್ಲಿ ಶಿಕ್ಷಣ ಅದಾಲತ್ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಶಿಕ್ಷಕರ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಈ ರೀತಿಯಾದ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಬೆಂಗಳೂರು ಮತ್ತು ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ 20 ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ 5-6 ಜಿಲ್ಲೆಗಳನ್ನು ಮುಗಿಸಲಾಗಿದ್ದು, ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳಿಸಲಾಗುದು ಎಂದು ದಿವಾಕರ್ ತಿಳಿಸಿದರು.

ಜಿಲ್ಲೆಯಲ್ಲಿನ ಕೆಲವೊಂದು ಸಮಸ್ಯೆಗಳನ್ನು ಇಲ್ಲಿಯೇ ಪರಿಹರಿಸಲಾಗಿದೆ. ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಲಾಗುವುದು. ಅದು ಸಾಧ್ಯವಾಗದಿದ್ದರೆ ಮುಂದಿನ ಕ್ರಮವನ್ನು ಶಿಕ್ಷಣ ಕಾಯ್ದೆಯ ಪ್ರಕಾರ ತೆಗೆದು ಕೊಳ್ಳಲಾಗುವುದೆಂದು ಹೇಳಿದರು.

ಸರಕು ಸಾಗಾಣಿಕೆಯ ವಾಹನಗಳಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಶಿಕ್ಷಕರ ಸಂಘದ ಪದಾಧಿಕಾರಿಗಳು ಸಂಘದ ನೆಪ ಹೇಳಿಕೊಂಡು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವ ದೂರುಗಳಿವೆ. ಇದರಿಂದ ಮಕ್ಕಳಿಗೆ ಅನ್ಯಾಯ ಆಗುತ್ತಿದೆ. ಕೆಲಸದ ನಂತರ ತಮ್ಮ ಸಂಘದ ಕೆಲಸವನ್ನು ಮಾಡಿಕೊಳ್ಳಲಿ ಎಂದು ನಿರ್ದೇಶನ ನೀಡುವುದಾಗಿ ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT